ಕ್ರೀಡೆ

ವಿಶ್ವಕಪ್ ವಿಜೇತ ಆಟಗಾರನಿಗೆ 6 ವರ್ಷ ನಿಷೇಧ ಹೇರಿದ ಐಸಿಸಿ

ಮುಂಬೈ: 2016ರ ಟಿ20 ವಿಶ್ವಕಪ್ ಚಾಂಪಿಯನ್ ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಬ್ಯಾಟರ್ ಮರ್ಲಾನ್ ಸ್ಯಾಮ್ಯುಯೆಲ್ಸ್‌ಗೆ ಐಸಿಸಿ 6 ವರ್ಷಗಳ ನಿಷೇಧ ಹೇರಿದೆ.

ಎಮಿರೇಟ್ಸ್ ಕ್ರಿಕೆಟ್ ಮಂಡಳಿಯ ಭ್ರಷ್ಟಾಚಾರ ವಿರೋಧಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದಡಿಯಲ್ಲಿ ಸ್ಯಾಮ್ಯುಯೆಲ್ಸ್‌ ಅವರನ್ನು ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿಷೇಧಿಸಲಾಗಿದೆ. 2020 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಸ್ಯಾಮ್ಯುಯೆಲ್ಸ್​ಗೆ ಈ ನಿಷೇಧದ ಶಿಕ್ಷೆ ಭಾರಿ ಹಿನ್ನಡೆಯನ್ನುಂಟು ಮಾಡಿದೆ.

ಏಕೆಂದರೆ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಬಳಿಕ ಸ್ಯಾಮ್ಯುಯೆಲ್ಸ್‌ ಪ್ರಪಂಚದಾದ್ಯಂತದ ಕ್ರಿಕೆಟ್ ಲೀಗ್‌ಗಳಲ್ಲಿ ಆಡುತ್ತಿದ್ದರು. ಆದರೀಗ ಅವರು ಮುಂದಿನ 6 ವರ್ಷಗಳ ಕಾಲ ಯಾವುದೇ ಲೀಗ್‌ನಲ್ಲಿ ಆಡಲು ಸಾಧ್ಯವಾಗುವುದಿಲ್ಲ. 2019 ರಲ್ಲಿ ನಡೆದ ಅಬುಧಾಬಿ ಟಿ10 ಲೀಗ್​ ಸಮಯದಲ್ಲಿ ಸ್ಯಾಮ್ಯುಯೆಲ್ಸ್, ಐಸಿಸಿ ನಿಯಮಗಳನ್ನು ಉಲ್ಲಂಘಿಸಿರುವುದು ಸಾಭೀತಾದ ಬಳಿಕ ಅವರಿಗೆ ನಿಷೇಧ ವಿಧಿಸಲಾಗಿದೆ.

 

Ashitha S

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

14 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

38 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago