ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಸರಣಿಯ ಐದನೇ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾ ಸಜ್ಜಾಗಿದೆ. ನಾಲ್ಕನೇ ಟಿ20 ಪಂದ್ಯ ಮುಗಿದ ಬೆನ್ನಲ್ಲೇ ಒಂದು ದಿನ ಕೂಡ ವಿಶ್ರಾಂತಿ ಇಲ್ಲಿದೆ ಇಂದು (ಆ.13) ಅಮೆರಿಕಾದ ಫ್ಲೋರಿಡಾದಲ್ಲಿರುವ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಗ್ರೌಂಡ್ನಲ್ಲಿ ಈ ಮಹತ್ವದ ಪಂದ್ಯ ನಡೆಯಲಿದೆ.
ಶನಿವಾರ ನಡೆದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ತೋರಿದ ಟೀಮ್ ಇಂಡಿಯಾ 9 ವಿಕೆಟ್ಗಳಿಂದ ಜಯ ಸಾಧಿಸಿದೆ. ಈ ಮೂಲಕ 2-2 ಅಂಕಗಳ ಅಂತರದಿಂದ ಸರಣಿ ಸಮಬಲಗೊಂಡಿದೆ. ಹೀಗಾಗಿ ಇಂದಿನದು ನಿರ್ಣಾಯಕವಾಗಿದ್ದು ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ.
ಭಾರತ-ವೆಸ್ಟ್ ಇಂಡೀಸ್ ನಡುವಣ ಐದನೇ ಟಿ20 ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8 ಗಂಟೆಗೆ ಶುರುವಾಗಲಿದೆ. ದೂರದರ್ಶನ ಸ್ಪೋರ್ಟ್ಸ್ (ಡಿಡಿ ಸ್ಪೋರ್ಟ್ಸ್) ಚಾನೆಲ್ನಲ್ಲಿ ನೇರ ಪ್ರಸಾರವಾಗಲಿದೆ. ಜೊತೆಗೆ ಲೈವ್ ಸ್ಟ್ರೀಮಿಂಗ್ ಫ್ಯಾನ್ ಮತ್ತು ಜಿಯೋ ಸಿನಿಮಾದಲ್ಲಿ ಲಭ್ಯವಿರುತ್ತದೆ.