ದುಬೈ: ಇಂಡಿಯನ್ ಪ್ರೀಮಿಯರ್ ಸೀಸನ್ 17 ರಲ್ಲಿ ಆರ್ಸಿಬಿ ತಂಡದ ಮಾಜಿ ವೇಗಿ ಹರ್ಷಲ್ ಪಟೇಲ್ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿಯಲಿದ್ದಾರೆ. ಈ ಬಾರಿಯ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆ ಘೋಷಿಸಿದ್ದ ಹರ್ಷಲ್ ಇದೀಗ ಮತ್ತೊಮ್ಮೆ ಎರಡಂಕಿ ಮೊತ್ತಕ್ಕೆ ಹರಾಜಾಗಿದ್ದಾರೆ.
ದುಬೈನಲ್ಲಿ ನಡೆಯುತ್ತಿರುವ ಈ ಹರಾಜು ಪ್ರಕ್ರಿಯೆಯಲ್ಲಿ ಹರ್ಷಲ್ ಪಟೇಲ್ ಖರೀದಿಗೆ ಭರ್ಜರಿ ಪೈಪೋಟಿ ಕಂಡು ಬಂತು. ಹರ್ಷಲ್ ಖರೀದಿಗೆ ಒಂದೆಡೆ ಎಸ್ಆರ್ಹೆಚ್ ಆಸಕ್ತಿ ತೋರಿದರೆ, ಮತ್ತೊಂದೆಡೆ ಪಂಜಾಬ್ ಕಿಂಗ್ಸ್ ಬಿಟ್ಟು ಕೊಡಲು ಸಿದ್ಧರಿರಲಿಲ್ಲ.
ಅದರಂತೆ ಅಂತಿಮವಾಗಿ ಹರ್ಷಲ್ ಪಟೇಲ್ ಅವರನ್ನು ಬರೋಬ್ಬರಿ 11.75 ಕೋಟಿ ರೂ. ನೀಡಿದ ಪಂಜಾಬ್ ಕಿಂಗ್ಸ್ ಖರೀದಿಸಿದೆ. ಈ ಹಿಂದೆ ಆರ್ಸಿಬಿ ಹರ್ಷಲ್ ಅವರನ್ನು 10.75 ಕೋಟಿ ರೂ.ಗೆ ಖರೀದಿಸಿತ್ತು.