ಮಹಿಳಾ ಏಷ್ಯಾಕಪ್ 2024 ಶ್ರೀಲಂಕಾದ ರಂಗಿ ದಂಬುಲ್ಲಾ ಕ್ರೀಡಾಂಗಣದಲ್ಲಿ ನಡೆದ 10 ನೇ ಪಂದ್ಯದಲ್ಲಿ, ಹಾಲಿ ಚಾಂಪಿಯನ್ ಟೀಂ ಇಂಡಿಯಾ ತನ್ನ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ನೇಪಾಳ ತಂಡವನ್ನು ರನ್ಗಳಿಂದ ಮಣಿಸಿ ಅಜೇಯ ತಂಡವಾಗಿ ಸೆಮಿಫೈನಲ್ ಸುತ್ತಿಗೆ ಪ್ರವೇಶಿಸಿದೆ.
ಲೀಗ್ ಸುತ್ತಿನಲ್ಲಿ ಆಡಿದ ಮೂರೂ ಪಂದ್ಯಗಳನ್ನು ಗೆದ್ದಿರುವ ಹರ್ಮನ್‌ಪ್ರೀತ್ ಕೌರ್ ಪಡೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಎರಡನೇ ಸ್ಥಾನದಲ್ಲಿರುವ ಪಾಕಿಸ್ತಾನ ತಂಡ ಆಡಿರುವ ಮೂರು ಪಂದ್ಯಗಳಲ್ಲಿ 2 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಒಂದು ಪಂದ್ಯದಲ್ಲಿ ಸೋಲು ಕಂಡಿದೆ.

