ಮಹಿಳೆಯರ ಏಷ್ಯಾಕಪ್ ಶ್ರೀಲಂಕಾದಲ್ಲಿ ನಡೆಯುತ್ತಿದ್ದು, ಭಾರತ ಮತ್ತು ಶ್ರೀಲಂಕಾ ನಡುವಿನ ಫೈನಲ್ ಪಂದ್ಯದೊಂದಿಗೆ ಈ ಪಂದ್ಯಾವಳಿ ಕೊನೆಗೊಳ್ಳಲಿದೆ. ದಂಬುಲ್ಲಾದ ರಂಗಿರಿ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಈ ಹೈವೋಲ್ಟೇಜ್ ಕದನಕ್ಕೆ ಆತಿಥ್ಯ ವಹಿಸುತ್ತಿದೆ.

ಟಾಸ್ ಗೆದ್ದ ಟೀಂ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಇದರೊಂದಿಗೆ ಎರಡು ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದೆ.

ಭಾರತ ತಂಡ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಉಮಾ ಛೆಟ್ರಿ, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ರಾಧಾ ಯಾದವ್, ತನುಜಾ ಕನ್ವರ್ ಮತ್ತು ರೇಣುಕಾ ಠಾಕೂರ್ ಸಿಂಗ್.