ಶ್ರೀಲಂಕಾ: ಮಹಿಳಾ ಏಷ್ಯಾಕಪ್​ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧಗೊಂಡಿದೆ. ನಾಳೆ ನಡೆಯುವ ಫೈನಲ್​ ಹಣಾಹಣಿಯಲ್ಲಿ ಹಾಲಿ ಚಾಂಪಿಯನ್​ ಭಾರತ ಮತ್ತು ಶ್ರೀಲಂಕಾ ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ. 7  ಬಾರಿಯ ಚಾಂಪಿಯನ್​ ಭಾರತವೇ ಈ ಬಾರಿಯೂ ಪ್ರಶಸ್ತಿ ಗೆಲ್ಲುವ ಹಾಟ್‌ ಫೇವರಿಟ್‌ ಆಗಿದೆ. ಅತ್ತ ಆತಿಥೇಯ ಲಂಕಾ ಚೊಚ್ಚಲ ಪ್ರಶಸ್ತಿ ಗೆಲ್ಲುವ ಇದಾರೆಯಲ್ಲಿದೆ. ಇತ್ತಂಡಗಳು ಕೂಡ ಈ ಬಾರಿ ಅಜೇಯ ತಂಡಗಳಾಗಿ ಫೈನಲ್​ಗೆ ಲಗ್ಗೆಯಿಟ್ಟಿದೆ.

ಇದುವರೆಗಿನ ಮಹಿಳಾ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ಮತ್ತು ಶ್ರೀಲಂಕಾ 5 ಬಾರಿ ಫೈನಲ್​ ಮುಖಾಮುಖಿಯಾಗಿವೆ. ಎಲ್ಲ ಪಂದ್ಯಗಳನ್ನು ಭಾರತವೇ ಗೆದ್ದು ಬೀಗಿದೆ. ಈ ಬಾರಿಯದ್ದು 6ನೇ ಮುಖಾಮುಖಿ. 6ನೇ ಪ್ರಯತ್ನದಲ್ಲಾದರೂ ಲಂಕಾ ಪ್ರೋಫಿ ಗೆಲ್ಲಬಹುದೇ ಎಂಬ ಪ್ರಶ್ನೆಗೆ ನಾಳೆ ಉತ್ತರ ಸಿಗಲಿದೆ.