Categories: ಕ್ರೀಡೆ

ವುಮೆನ್ಸ್ ಪ್ರೀಮಿಯರ್ ಲೀಗ್​: ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ರೋಚಕ ಜಯ

ಬೆಂಗಳೂರು:  ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ  ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ರೋಚಕ ಜಯ ಸಾಧಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಜಯಿಸಿದ ಮುಂಬೈ ಇಂಡಿಯನ್ಸ್ ನಾಯಕಿ ಹರ್ಮನ್​ಪ್ರೀತ್ ಕೌರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ (1) ಶಬ್ನಿಮ್ ಇಸ್ಮಾಯಿಲ್ ಎಸೆದ ಮೊದಲ ಓವರ್​ನಲ್ಲೇ ಕ್ಲೀನ್ ಬೌಲ್ಡ್ ಆಗಿದ್ದರು. ಈ ಹಂತದಲ್ಲಿ ಜೊತೆಗೂಡಿದ ನಾಯಕಿ ಮೆಗ್ ಲ್ಯಾನಿಂಗ್ ಹಾಗೂ ಅಲೀಸ್ ಕ್ಯಾಪ್ಟಿ ಅರ್ಧಶತಕದ ಜೊತೆಯಾಟವಾಡಿದರು.

ಇನ್ನು ಅಂತಿಮ ಹಂತದಲ್ಲಿ ಸ್ಪೋಟಕ ಇನಿಂಗ್ಸ್ ಆಡಿದ ಜೆಮಿಮಾ ಕೇವಲ 24 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 42 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 171 ರನ್ ಕಲೆಹಾಕಿತು.

ಬೃಹತ್ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಯಶಸ್ವಿಯಾಯಿತು. ಮೊದಲ ಓವರ್​ನ 2ನೇ ಎಸೆತದಲ್ಲಿ ಹೇಲಿ ಮ್ಯಾಥ್ಯೂಸ್ (0) ವಿಕೆಟ್ ಪಡೆದು ಮರಿಝನ್ನೆ ಕಪ್ ಡೆಲ್ಲಿಗೆ ಮೊದಲ ಯಶಸ್ಸು ತಂದುಕೊಟ್ಟರು.

ಇದರ ಬೆನ್ನಲ್ಲೇ ಸ್ಕೀವರ್ ಬ್ರಂಟ್ (19) ಅರುಂಧತಿ ರೆಡ್ಡಿ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಇದಾಗ್ಯೂ ಮತ್ತೊಂದೆಡೆ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಯಾಸ್ತಿಕಾ ಭಾಟಿಯಾ 45 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 57 ರನ್ ಬಾರಿಸಿದರು.

ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕಿ ಹರ್ಮನ್​ಪ್ರೀತ್ ಕೌರ್ ಡೆಲ್ಲಿ ಕ್ಯಾಪಿಟಲ್ಸ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಕೌರ್ ಫೋರ್​ಗಳ ಸುರಿಮಳೆಗೈದರು. ಈ ಮೂಲಕ ಕೇವಲ 1 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 55 ರನ್ ಬಾರಿಸಿದರು.

ಕೊನೆಯ ಓವರ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ 12 ರನ್​ಗಳ ಅವಶ್ಯಕತೆಯಿತ್ತು. ಅಲೀಸ್ ಕ್ಯಾಪ್ಟಿ ಎಸೆದ ಅಂತಿಮ ಓವರ್​ನ ಮೊದಲ ಎಸೆತದಲ್ಲಿ ಪೂಜಾ ವಸ್ತ್ರಾಕರ್ ಕ್ಯಾಚ್ ನೀಡಿ ಔಟಾದರು. 2ನೇ ಎಸೆತದಲ್ಲಿ ಅಮನ್​ಜೋತ್ ಕೌರ್ 2 ರನ್ ಕಲೆಹಾಕಿದರು. 3ನೇ ಎಸೆತದಲ್ಲಿ 1 ರನ್​.

ಕೊನೆಯ ಎಸೆತದಲ್ಲಿ 5 ರನ್​ಗಳು ಬೇಕಿತ್ತು. ಈ ವೇಳೆ ಕ್ರೀಸ್​ಗೆ ಆಗಮಿಸಿದ ಸಂಜನಾ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಮುಂಬೈ ಇಂಡಿಯನ್ಸ್​ಗೆ ರೋಚಕ ಜಯ ತಂದುಕೊಟ್ಟರು.

Ashika S

Recent Posts

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ : ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು - ಅಳಿಕೆ ಬಂಟ್ವಾಳ…

7 mins ago

ಭಾರೀ ಗಾಳಿ ಮಳೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ…

10 mins ago

ದ.ಕ ಬರ ಪರಿಸ್ಥಿತಿ ಹಿನ್ನಲೆ ನೀರು ಪೂರೈಕೆಗೆ ಜಿಲ್ಲಾಡಳಿತ ಮುಂಜಾಗೃತ ಕ್ರಮ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಸಾರ್ವಜನಿಕರಿಗರ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾಡಳಿತದಿಂದ ಈಗಾಗಲೇ ಸಾಕಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ.…

17 mins ago

ಕಲ್ಲಡ್ಕದಲ್ಲಿ ಪ್ರಥಮ ಮಳೆಗೆ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿ : ಸಂಚಾರ ಅಸ್ತವ್ಯಸ್ತ

ನಿನ್ನೆ ಸುರಿದ ಪ್ರಥಮ ಮಳೆಗೆ ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತೊಡುಕುಂಟಾಗಿದೆ.

23 mins ago

ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣ: ಭಾರತೀಯ ಮೂಲದ ವ್ಯಕ್ತಿ ಬಂಧನ

ಕೆನಡಾದಲ್ಲಿ ಬಹುಕೋಟಿ ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ವ್ಯಕ್ತಿಯನ್ನು ಟೊರೊಂಟೋ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌…

36 mins ago

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ : ಆನ್‌ಲೈನ್‌ನಲ್ಲಿ ಹೀಗೆ ನೋಡಿ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದೆ. ಈ ವರ್ಷದ ತೇರ್ಗಡೆ ಪ್ರಮಾಣ…

44 mins ago