News Karnataka Kannada
Friday, May 03 2024
ಕ್ರೀಡೆ

ವುಮೆನ್ಸ್ ಪ್ರೀಮಿಯರ್ ಲೀಗ್: ಗುಜರಾತ್​ ವಿರುದ್ಧ ಆರ್​​ಸಿಬಿಗೆ 8 ವಿಕೆಟ್​ಗಳ ಜಯ

ಮಹಿಳಾ ಪ್ರೀಮಿಯರ್ ಲೀಗ್ ಎರಡನೇ ಆವೃತ್ತಿಯ ಅಂತಿಮ ಪಂದ್ಯ ಇಂದು (ಮಾರ್ಚ್ 17) ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ.
Photo Credit : News Kannada

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ ತನ್ನ ಎರಡನೇ ಪಂದ್ಯದಲ್ಲಿಯೂ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು  ತಂಡ ಭರ್ಜರಿ ಜಯ ಸಾಧಿಸಿದೆ.

ಟಾಸ್​ ಗೆದ್ದು ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡ ಆರ್​ಸಿಬಿ ಗುಜರಾತ್​ ವಿರುದ್ಧ ಅದ್ಭುತ ಪ್ರದರ್ಶನ ನೀಡಿತು. ಈ ಮೂಲಕ ಗುಜರಾತ್​ ಜೈಂಟ್ಸ್​ ತಂಡವು 20 ಓವರ್​ ಗೆ 7 ವಿಕೆಟ್​ ಗೆ 107 ರನ್​​ ಗಳಿಸುವ ಮೂಲಕ ಆರ್​ಸಿಬಿ ತಂಡಕ್ಕೆ 108 ರನ್​ ಟಾರ್ಗೆಟ್ ನೀಡಿತು.

ಕೆಳ ಕ್ರಮಾಂಕದಲ್ಲಿ ಆರ್​ಸಿಬಿ ವಿರುದ್ಧ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಹೇಮಲತಾ 31 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 100ರ ಗಡಿದಾಟಿಸಿದರು. ಅಂತಿಮವಾಗಿ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಗುಜರಾತ್ ಜೈಂಟ್ಸ್ ತಂಡವು 107 ರನ್​ ಕಲೆಹಾಕಿತು.

108 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ಪರ ಸೋಫಿ ಡಿವೈನ್ (6) ಮತ್ತೊಮ್ಮೆ ವಿಫಲರಾದರು. ಮತ್ತೊಂದೆಡೆ ನಾಯಕಿಯ ಆಟವಾಡಿದ ಸ್ಮೃತಿ ಮಂಧಾನ 27 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 43 ರನ್ ಬಾರಿಸಿ ಮಿಂಚಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು