News Karnataka Kannada
Monday, April 22 2024
Cricket
ಕ್ರೀಡೆ

ವುಮೆನ್ಸ್ ಪ್ರೀಮಿಯರ್ ಲೀಗ್: ಆರ್​ಸಿಬಿಗೆ 114 ರನ್​ಗಳ ಗುರಿ ನೀಡಿದ ಡೆಲ್ಲಿ ಕ್ಯಾಪಿಟಲ್ಸ್

ಮಹಿಳಾ ಪ್ರೀಮಿಯರ್ ಲೀಗ್ ಎರಡನೇ ಆವೃತ್ತಿಯ ಅಂತಿಮ ಪಂದ್ಯ ಇಂದು (ಮಾರ್ಚ್ 17) ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ.
Photo Credit : News Kannada

ದೆಹಲಿ: ಮಹಿಳಾ ಪ್ರೀಮಿಯರ್ ಲೀಗ್ ಎರಡನೇ ಆವೃತ್ತಿಯ ಅಂತಿಮ ಪಂದ್ಯ ಇಂದು (ಮಾರ್ಚ್ 17) ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರ್​ಸಿಬಿ  ಬೌಲರ್​ಗಳ ದಾಳಿಗೆ ನಲುಗಿ 18.3 ಓವರ್​ಗಳಲ್ಲಿ ತನ್ನೇಲ್ಲಾ ವಿಕೆಟ್ ಕಳೆದುಕೊಂಡು 113 ರನ್ ಕಲೆಹಾಕಿದೆ. ಈ ಮೂಲಕ ಆರ್​ಸಿಬಿಗೆ 114 ರನ್​ಗಳ ಗೆಲುವಿನ ಗುರಿ ನೀಡಿದೆ.

ಆರ್​ಸಿಬಿ ಪರ ಬೌಲಿಂಗ್​ನಲ್ಲಿ ಮಿಂಚಿದ ಕನ್ನಡತಿ ಶ್ರೇಯಾಂಕ ಪಾಟೀಲ್  4 ವಿಕೆಟ್ ಪಡೆದರೆ, ಸೋಫಿ ಮೊಲಿನೆಕ್ಸ್ 3 ಹಾಗೂ ಆಶಾ ಶೋಭನಾ 2 ವಿಕೆಟ್ ಪಡೆದರು.

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಡೆಲ್ಲಿ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಆರಂಭಿಕರಾದ ನಾಯಕಿ ಮೆಗ್ ಲ್ಯಾನಿಂಗ್ ಹಾಗೂ ಶಫಾಲಿ ವರ್ಮಾ ಮೊದಲ ವಿಕೆಟ್​ಗೆ 64 ರನ್​ಗಳ ಜೊತೆಯಾಟವನ್ನಾಡಿದರು.

ಈ ವೇಳೆ 27 ಎಸೆತಗಳಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 44 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದ ಶಫಾಲಿ ಮೊಲಿನೆಕ್ಸ್ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಕ್ಯಾಚಿತ್ತು ಔಟಾದರು.

ಆ ನಂತರ ಬಂದ ಭರವಸೆಯ ಆಟಗಾರ್ತಿ ಜೆಮಿಮಾ ರಾಡ್ರಿಗಸ್ 2 ಎಸೆತಗಳನ್ನು ಎದುರಿಸಿ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದರು. ಜಮಿಮಾ ನಂತರ ಬಂದ ಆಲಿಸ್ ಕ್ಯಾಪ್ಸಿ ಕೂಡ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿ ಪೆವಿಲಿಯನ್ ಹಾದಿ ಹಿಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು