ಮಹಿಳಾ ಟಿ20 ವಿಶ್ವಕಪ್ ಇಂದಿನಿಂದ ಆರಂಭವಾಗಲಿದೆ. ಯುಎಇ ನಲ್ಲಿ ನಡೆಯಲಿರುವ ಈ ಟೂರ್ನಿಯ ಮೊದಲ ಸುತ್ತಿನಲ್ಲಿ ಭಾರತ ತಂಡವು ಆಸ್ಟ್ರೇಲಿಯಾ, ನ್ಯೂಝಿಲೆಂಡ್, ಪಾಕಿಸ್ತಾನ್ ಮತ್ತು ಶ್ರೀಲಂಕಾ ತಂಡಗಳನ್ನು ಎದುರಿಸಲಿದೆ. ಅಲ್ಲದೆ ಗ್ರೂಪ್-ಎ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿ ಕಾಣಿಸಿಕೊಂಡರೆ ಸೆಮಿಫೈನಲ್​ಗೆ ಅರ್ಹತೆ ಪಡೆಯಬಹುದು.

ಈ ಬಾರಿಯ ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಗ್ರೂಪ್​ ಹಂತದಲ್ಲಿ ನಡೆಯಲಿದ್ದು, ಇಲ್ಲಿ 10 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಈ ಗ್ರೂಪ್​ಗಳಿಗೆ ಪತ್ಯೇಕ ಪಾಯಿಂಟ್ಸ್ ಟೇಬಲ್ ಇರಲಿದ್ದು, ಅದರಂತೆ ಅಂಕ ಪಟ್ಟಿಗಳಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆಯುವ ನಾಲ್ಕು ತಂಡಗಳು ಸೆಮಿಫೈನಲ್​ಗೇರಲಿದೆ.

ಗುಂಪು A : ಆಸ್ಟ್ರೇಲಿಯಾ, ಭಾರತ, ನ್ಯೂಝಿಲೆಂಡ್, ಪಾಕಿಸ್ತಾನ್, ಶ್ರೀಲಂಕಾ. ಗುಂಪು B : ಸೌತ್ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಬಾಂಗ್ಲಾದೇಶ, ಸ್ಕಾಟ್ಲೆಂಡ್. ಟೀಮ್ ಇಂಡಿಯಾ ಅಕ್ಟೋಬರ್ 4 ರಂದು ನ್ಯೂಝಿಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದ್ದು, ಅಕ್ಟೋಬರ್ 6 ರಂದು ನಡೆಯಲಿರುವ ತನ್ನ ಎರಡನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡವನ್ನು ಎದುರಿಸಲಿದೆ.