ಢಾಕಾ: ಮಹಿಳಾ ಟಿ20 ವಿಶ್ವಕಪ್‌ ಟೂರ್ನಿ ಅಕ್ಟೋಬರ್‌ನಲ್ಲಿ ಬಾಂಗ್ಲಾದೇಶ ಆತಿಥ್ಯದಲ್ಲಿ ನಡೆಯಲಿದೆ. ಬಾಂಗ್ಲಾದೇಶದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಅಲ್ಲಿನ ನಾಗರೀಕರು ನಡೆಸುತ್ತಿರುವ ಪ್ರತಿಭಟನೆ, ಗಲಭೆಗಳು ಹಿಂಸಾತ್ಮಕ ರೂಪಕ್ಕೆ ಹೋಗಿದೆ.

ಬಾಂಗ್ಲಾದೇಶದಲ್ಲಿ ಶಾಂತಿ ನೆಲೆಸದೇ ಹೋದರೆ, ಭದ್ರತಾ ಕಾರಣದಿಂದ ಟೂರ್ನಿಯನ್ನು ಬಾಂಗ್ಲಾದೇಶದಿಂದ ಬೇರೆ ದೇಶಕ್ಕೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ ಹೇಳಿದೆ.

ಮೂಲಗಳ ಪ್ರಕಾರ ಟೂರ್ನಿ ಸ್ಥಳಾಂತರಗೊಂಡರೆ ಭಾರತದಲ್ಲಿ ನಡೆಯಲಿದೆ ಎನ್ನಲಾಗಿದೆ. ಸದ್ಯ ಪೊಲೀಸರು ಢಾಕಾದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದು. ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವವರ ಮೇಲೆ ಲಾಠಿ ಚಾರ್ಜ್​ ನಡೆಸುತ್ತಿದ್ದಾರೆ.

ಕೆಲವರು ಪೊಲೀಸರ ಮೇಲೆಯೇ ದಾಳಿ ನಡೆಸುತ್ತಿರುವ ವಿಡಿಯೋಗಳು ಕೂಡ ವೈರಲ್​ ಆಗುತ್ತಿದೆ. ಇದುವರೆಗೆ ಹಿಂಸಾಚಾರದಲ್ಲಿ 150ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

https://x.com/bozgabi/status/1814965378541359266?