ಮುಂಬೈ: ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಬಾಂಗ್ಲಾದೇಶದಲ್ಲಿ ಚಾಲ್ತಿಯಲ್ಲಿರುವ ಅಶಾಂತಿಯ ಕಾರಣದಿಂದ ಮಹಿಳಾ ಟಿ20 ವಿಶ್ವಕಪ್ ಕೂಟವನ್ನು ಸ್ಥಳಾಂತರಿಸಲಾಗಿದೆ.ಈ ಹಿಂದೆ ಟಿ20 ವಿಶ್ವಕಪ್‌ ಕೂಟವನ್ನು ಬಾಂಗ್ಲಾದೇಶದಲ್ಲಿ ನಡೆಸಲು ಯೋಜಿಸಲಾಗಿತ್ತು. ಇದೀಗ ಅಲ್ಲಿಂದ ಸ್ಥಳಾಂತರವಾಗಿದ್ದು, ಯುನೈಟೆಡ್ ಅರಬ್ ಎಮಿರೇಟ್ಸ್‌ ನಲ್ಲಿ ನಡೆಸಲಾಗುವುದು ಎಂದು ಐಸಿಸಿ ಮಂಗಳವಾರ ಹೇಳಿದೆ.

ಪಂದ್ಯಾವಳಿಯು ಯುಎಇಯ ಎರಡು ಸ್ಥಳಗಳಾದ ದುಬೈ ಮತ್ತು ಶಾರ್ಜಾದಲ್ಲಿ ಅಕ್ಟೋಬರ್ 3 ರಿಂದ 20 ರವರೆಗೆ ನಡೆಯಲಿದೆ. “ಬಾಂಗ್ಲಾದೇಶ ಮಹಿಳಾ ಟಿ20 ವಿಶ್ವಕಪ್ ಆಯೋಜಿಸದಿರುವುದು ನಾಚಿಕೆಗೇಡಿನ ಸಂಗತಿ” ಎಂದು ಐಸಿಸಿ ಮುಖ್ಯ ಕಾರ್ಯನಿರ್ವಾಹಕ ಜೆಫ್ ಅಲ್ಲಾರ್ಡಿಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜತೆಗೆ ಆತಿಥ್ಯ ವಹಿಸಿದ್ದಕ್ಕಾಗಿ ಎಮಿರೇಟ್ಸ್ ಕ್ರಿಕೆಟ್ ಮಂಡಳಿಗೆ ಧನ್ಯವಾದ ತಿಳಿಸಿದ್ದಾರೆ.

Details 👇https://t.co/20vK9EMEdN

— ICC (@ICC) August 20, 2024