ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಭಾರತದ ಅನೇಕ ಅಥ್ಲೆಟ್ಸ್ಗಳು ಭಾಗಿಯಾಗಿದ್ದು, ಇದೀಗ ಪುರುಷರ ಲಾಂಗ್ ಜಂಪ್ನಲ್ಲಿ ಭಾರತದ ಮುರಳಿ ಶ್ರೀಶಂಕರ್ ಫೈನಲ್ಗೆ ಅರ್ಹತೆ ಪಡೆದುಕೊಂಡಿದ್ದಾರೆ. ಜೊತೆಗೆ ಈ ಸಾಧನೆ ಮಾಡಿರುವ ಮೊದಲ ಭಾರತೀಯರಾಗಿದ್ದಾರೆ.
ಅರ್ಹತಾ ಸುತ್ತಿನಲ್ಲಿ 8 ಮೀಟರ್ ಜಿಗಿಯುವ ಮೂಲಕ ಕೇರಳದ 23 ವರ್ಷದ ಶ್ರೀಶಂಕರ್ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ಈ ಸುತ್ತಿನಲ್ಲಿ ಜಪಾನ್ನ ಯುಕಿ ಹಶಿಯೋಕಾ (8.18 ಮೀ) ಮತ್ತು ಯುಎಸ್ಎಯ ಮಾರ್ಕ್ವಿಸ್ ಡೆಂಡಿ (8.16 ಮೀ) ಜಿಗಿದಿದ್ದಾರೆ.
ಈ ಹಿಂದೆ ಭಾರತದ ಅಂಜು ಬಾಬಿ ಜಾರ್ಜ್ ಲಾಂಗ್ ಜಂಪ್ ಮಹಿಳಾ ವಿಭಾಗದ ಸ್ಪರ್ಧೆಯಲ್ಲಿ ಫೈನಲ್ಗೆ ಪ್ರವೇಶ ಪಡೆದುಕೊಂಡಿದ್ದರು. ಇವರು 2003ರಲ್ಲಿ ಪ್ಯಾರಿಸ್ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಮತ್ತೊಂದು ಸ್ಪರ್ಧೆಯಲ್ಲಿ ಅವಿನಾಶ್ ಸೇಬಲ್ ಪುರುಷರ 3 ಸಾವಿರ ಮೀಟರ್ ಸ್ಟೀಪಲ್ ಚೇಸ್ನಲ್ಲಿ ಫೈನಲ್ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಜಾವಲಿನ್ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಭಾಗಿಯಾಗಿದ್ದು, ಚಿನ್ನಕ್ಕೆ ಮುತ್ತಿಕ್ಕುವ ಸಾಧ್ಯತೆ ದಟ್ಟವಾಗಿದೆ.