News Karnataka Kannada
Tuesday, April 16 2024
Cricket
ಕ್ರೀಡೆ

ಏಕದಿನ ವಿಶ್ವಕಪ್ ಪಂದ್ಯಗಳ ಟಿಕೆಟ್ ಮಾರಾಟಕ್ಕೆ ದಿನಾಂಕ ಫಿಕ್ಸ್​

world cup 2023 tickets
Photo Credit : Twitter

ನವದೆಹಲಿ: ಈಗಾಗಲೇ ಭಾರತ ಆತಿಥ್ಯದಲ್ಲಿ ನಡೆಯುವ ಏಕದಿನ ವಿಶ್ವ ಕಪ್​ ಟೂರ್ನಿಯ ವೇಳಾಪಟ್ಟಿ ಪ್ರಕಟಗೊಂಡಿದೆ. ಅಭ್ಯಾಸ ಪಂದ್ಯಗಳ ಪಟ್ಟಿಯೂ ಬಿಡುಗಡೆಗೊಂಡಿದೆ. ಇದೀಗ ಈ ಮಹತ್ವದ ಟೂರ್ನಿಯನ್ನು ಕಣ್ತುಂಬಿಕ್ಕೊಳ್ಳಲು ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಬಿಸಿಸಿಐ ಮತ್ತು ಐಸಿಸಿ ಮತ್ತೊಂದು ಸಿಹಿ ಸುದ್ದಿ ನೀಡಿದೆ.

ಪಂದ್ಯಗಳ ಆನ್‌ಲೈನ್‌ ಟಿಕೆಟ್‌ ಮಾರಾಟವು ಜುಲೈ 1ರಿಂದ ಆರಂಭಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಈ ಟೂರ್ನಿ ದೇಶದ ಪ್ರಮುಖ 9 ನಗರಗಳಲ್ಲಿ ನಡೆಯುವ ಕಾರಣ ಹಲವು ಕಡೆಗಳಿಂದ ಪಂದ್ಯ ವೀಕ್ಷಿಸಲು ಅಭಿಮಾನಿಗಳು ಬರುತ್ತಾರೆ. ಪ್ರಯಾಣದ ತೊಂದರೆಯನ್ನು ತಪ್ಪಿಸುವ ಸಲುವಾಗಿ ಬಹುಪಾಲು ಟಿಕೆಟ್​ಗಳು ಆನ್‌ಲೈನ್‌ನಲ್ಲೇ ಮಾರಾಟ ಮಾಡುವ ಸಾಧ್ಯತೆ ಇದೆ ಎಂದು ಮೂಲವೊಂದು ತಿಳಿಸಿದೆ. ಸ್ಟೇಡಿಯಂನಲ್ಲಿರುವ ಕೌಂಟರ್‌ಗಳಲ್ಲಿ ಕೆಲವೇ ಸಾವಿರ ಟಿಕೆಟ್‌ಗಳನ್ನು ಮಾರಾಟಕ್ಕಿಡಲು ಐಸಿಸಿ ಹಾಗೂ ಬಿಸಿಸಿಐ ನಿರ್ಧರಿಸಿವೆ ಎನ್ನಲಾಗಿದೆ.

ಟಿಕೆಟ್‌ ದರವನ್ನು ಪಂದ್ಯದ ಬೇಡಿಕೆಗೆ ತಕ್ಕಂತೆ ನಿಗದಿಪಡಿಸುವ ಸಾಧ್ಯತೆ ಇದೆ. ಭಾರತ ಮತ್ತು ಪಾಕಿಸ್ತಾನ ವಿರುದ್ಧದ ಪಂದ್ಯಗಳ ಬೆಲೆ ಅಧಿಕವಾಗಿರುವ ಸಾಧ್ಯತೆ ಹೆಚ್ಚಾಗಿದೆ. ಸದ್ಯದ ಮಾಹಿತಿ ಪ್ರಕಾರ ಅಂದಾಜು 500ರಿಂದ 10,000ದ ವರೆಗೂ ವಿವಿಧ ದರಗಳ ಟಿಕೆಟ್‌ಗಳು ಖರೀದಿಗೆ ಲಭ್ಯವಿರಲಿವೆ ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು