Categories: ಕ್ರೀಡೆ

ಏಕದಿನ ವಿಶ್ವಕಪ್‌: ಭಾರತ-ದಕ್ಷಿಣ ಆಫ್ರಿಕಾ ನಡುವೆ ಇಂದು ಹೈ ವೋಲ್ಟೇಜ್‌ ಪಂದ್ಯ

ಮುಂಬೈ: ಏಕದಿನ ವಿಶ್ವಕಪ್ ನಲ್ಲಿ ಇಂದು ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ತೆಂಬ ಬವುಮಾ ನೇತೃತ್ವದ ದಕ್ಷಿಣ ಆಫ್ರಿಕಾ ಪಂದ್ಯಗಳ ನಡುವಣ ಪಂದ್ಯ ನಡೆಯಲಿದೆ.

ಕೋಲ್ಕತ್ತಾ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುವ ಈ ಪಂದ್ಯ ಟೀಮ್ ಇಂಡಿಯಾಕ್ಕೆ ತುಂಬಾ ವಿಶೇಷ. ನವೆಂಬರ್ 5 ರಂದು ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹುಟ್ಟುಹಬ್ಬ. 35ನೇ ವಸಂತಕ್ಕೆ ಕಾಲಿಡಲಿರುವ ಕೊಹ್ಲಿಯ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ಈಗಾಗಲೇ ಸಿಎಬಿ ಭರ್ಜರಿ ತಯಾರಿ ನಡೆಸುತ್ತಿದೆ. ಇದರ ನಡುವೆ ನಾಯಕ ರೋಹಿತ್ ಶರ್ಮಾ ಕೂಡ ಕೊಹ್ಲಿಗೆ ಗೆಲುವಿನ ಉಡುಗೊರೆ ನೀಡುವ ಪ್ಲಾನ್​ನಲ್ಲಿದ್ದಾರೆ.

ಈ ಬಾರಿಯ ವಿಶ್ವಕಪ್​ನಲ್ಲಿ ಭಾರತ ಆಡಿರುವ ಎಲ್ಲ ಏಳು ಪಂದ್ಯಗಳಲ್ಲಿ ಗೆದ್ದು ಸೆಮಿ ಫೈನಲ್​ಗೆ ಕ್ವಾಲಿಫೈಯರ್ ಆಗಿದೆ. ಇತ್ತ ದ. ಆಫ್ರಿಕಾ ಆಡಿರುವ ಏಳು ಪಂದ್ಯಗಳ ಪೈಕಿ ಆರರಲ್ಲಿ ಗೆದ್ದು ಎರಡನೇ ಸ್ಥಾನದಲ್ಲಿದೆ. ಹೀಗಾಗಿ ಹರಿಣಗಳ ಪಡೆ ಭಾರತಕ್ಕೆ ಸುಲಭ ಸವಾಲಂತು ಅಲ್ಲವೇ ಅಲ್ಲ. ಟೀಮ್ ಇಂಡಿಯಾಕ್ಕೆ ಜಯಕೂಡ ಮುಖ್ಯ ಆಗಿರುವ ಕಾರಣ ಹೊಸ ಆಟಗಾರನನ್ನು ಕರೆತರುವ ಪ್ರಯತ್ನವನ್ನು ರೋಹಿತ್ ಮಾಡಬಹುದು.

Gayathri SG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

5 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

6 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

6 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

6 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

7 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

8 hours ago