ಅಹಮದಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ವಿಶ್ವಕಪ್ 2023 ಫೈನಲ್ ಪಂದ್ಯ ಭಾರಿ ಕುತೂಹಲ ಕೆರಳಿಸಿದೆ. ಈ ಪಂದ್ಯ ನಡೆಯುವ ವೇಳೆಯೇ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ ಸಂಭವಿಸಿದೆ.
ಓರ್ವ ಅಭಿಮಾನಿ ಏಕಾಏಕಿ ಮೈದಾನಕ್ಕೆ ನುಗ್ಗಿದ್ದು, ವಿರಾಟ್ ಕೊಹ್ಲಿಯನ್ನು ತಬ್ಬಿಕೊಂಡಿದ್ದಾನೆ. ಪ್ಯಾಲೆಸ್ಟೀನ್ ಟಿ ಶರ್ಟ್ ಧರಿಸಿದ್ದ ಅಭಿಮಾನಿಯೊಬ್ಬ ಪಂದ್ಯ ನಡೆಯುತ್ತಿರುವಾಗ ಮೈದಾನಕ್ಕೆ ನುಗ್ಗಿದ್ದು, ಬಳಿಕ ಆತನನ್ನು ಬಂಧಿಸಲಾಗಿದೆ.