News Karnataka Kannada
Monday, April 29 2024
ಕ್ರೀಡೆ

ಜೈಪುರದಲ್ಲಿ ನಿರ್ಮಾಣವಾಗಲಿದೆ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್‌ ಕ್ರೀಡಾಂಗಣ

World's third largest cricket stadium to come up in Jaipur
Photo Credit : News Kannada

ಜೈಪುರ: ವೇದಾಂತ ಅಂಗಸಸ್ಥೆ ಹಿಂದೂಸ್ತಾನ್ ಜಿಂಕ್ ಲಿಮಿಟೆಡ್ (ಎಚ್‌ಝಡ್‌ಎಲ್) ಜೈಪುರದ ಚೊನ್ಪ್ ಗ್ರಾಮದಲ್ಲಿ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣದ ಅಭಿವೃದ್ಧಿಗಾಗಿ ರಾಜಸ್ಥಾನ ಕ್ರಿಕೆಟ್ ಅಸೋಸಿಯೇಷನ್ ​​(ಆರ್‌ಸಿಎ) ಯೊಂದಿಗೆ ಎಂಒಯುಗೆ ಸಹಿ ಹಾಕಿದೆ.

ಕ್ರೀಡಾಂಗಣಕ್ಕೆ 300 ಕೋಟಿ ರೂಪಾಯಿಗಳನ್ನು ಖರ್ಚು ಆಗಲಿದೆ. ಇದು ಭಾರತದ ಕ್ರೀಡಾ ಮೂಲಸೌಕರ್ಯದಲ್ಲಿ ಅತಿದೊಡ್ಡ ಕಾರ್ಪೊರೇಟ್ ಹೂಡಿಕೆಗಳಲ್ಲಿ ಒಂದಾಗಿದೆ. ವೇದಾಂತ ರಿಸೋರ್ಸಸ್ ಲಿಮಿಟೆಡ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷ ಅನಿಲ್ ಅಗರ್ವಾಲ್ ಅವರ ಹೆಸರನ್ನು ಅಂತರರಾಷ್ಟ್ರೀಯ ಕ್ರೀಡಾಂಗಣಕ್ಕೆ ಇಡಲಾಗುವುದು.

100 ಎಕರೆ ಪ್ರದೇಶದಲ್ಲಿ 75,000 ಜನರು ಕುಳಿತುಕೊಳ್ಳುವ ಸಾಮರ್ಥ್ಯದೊಂದಿಗೆ ಇದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಮತ್ತು ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಮೈದಾನದ ನಂತರ ವಿಶ್ವದ ಮೂರನೇ ಅತಿದೊಡ್ಡ ಕ್ರೀಡಾಂಗಣವಾಗಲಿದೆ.

ಕ್ರೀಡಾಂಗಣ 100 ಎಕರೆ ವಿಸ್ತೀರ್ಣ ಹೊಂದಲಿದ್ದು, 75,000 ಕ್ಕೂ ಹೆಚ್ಚು ಆಸನ ಸಾಮರ್ಥ್ಯ ಹೊಂದಿರುತ್ತದೆ. ಆಟದ ಮೈದಾನದ ಪ್ರದೇಶದ ಗಾತ್ರಕ್ಕೆ ಸಂಬಂಧಿಸಿದಂತೆ ಈ ಕ್ರೀಡಾಂಗಣವು ವಿಶ್ವದಲ್ಲೇ ಅತಿ ದೊಡ್ಡದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು