ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವೇಗದ ಬೌಲರ್ ಯಶ್ ದಯಾಳ್ ಅವರು ಪ್ರಸಕ್ತ ಸಾಲಿನ ಐಪಿಎಲ್ ತಂಡವನ್ನು ಸೇರಿಕೊಳ್ಳುತ್ತಿಲ್ಲ ಎಂದು ಆರ್‌ಸಿಬಿಯ ಕ್ರಿಕೆಟ್ ನಿರ್ದೇಶಕ ಮೊ ಬೊಬಾಟ್ ಖಚಿತಪಡಿಸಿದ್ದಾರೆ.
ವೈಯಕ್ತಿಕ ಅಥವಾ ಆರೋಗ್ಯದ ಕಾರಣಗಳಿಂದಾಗಿ ಅವರು ಈ ನಿರ್ಧಾರ ತೆಗೆದುಕೊಂಡಿರಬಹುದು ಎನ್ನಲಾಗಿದ್ದರೂ, ಅವರು ತಂಡದ ಒಪ್ಪಂದದ ಅಡಿಯಲ್ಲೇ ಇರಲಿದ್ದಾರೆ. ಆದರೆ ಮೈದಾನದಲ್ಲಿ ಆರ್‌ಸಿಬಿ ಪರ ಈ ಸೀಸನ್‌ನಲ್ಲಿ ಅವರು ಕಾಣಿಸಿಕೊಳ್ಳುವುದಿಲ್ಲ.
ಕಳೆದ ಸೀಸನ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಯಶ್ ಅಲಭ್ಯತೆ ತಂಡದ ಬೌಲಿಂಗ್ ವಿಭಾಗಕ್ಕೆ ಸ್ವಲ್ಪ ಹಿನ್ನಡೆಯಾಗುವ ಸಾಧ್ಯತೆಯಿದೆ.

