ಪ್ಯಾರಿಸ್: ಪ್ಯಾರಿಸ್ ಪ್ಯಾರಾಲಿಂಪಿಕ್ಸ್’ನ ಪುರುಷರ ಡಿಸ್ಕಸ್ ಥ್ರೋ ಎಫ್-56 ಸ್ಪರ್ಧೆಯಲ್ಲಿ ಯೋಗೇಶ್ ಕಥುನಿಯಾ ಬೆಳ್ಳಿ ಪದಕ ಗೆದ್ದಿದ್ದಾರೆ. ಯೋಗೇಶ್ 42.22 ಮೀಟರ್ ದೂರ ಎಸೆದು ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಮೂಲಕ ಫ್ರೆಂಚ್ ರಾಜಧಾನಿಯಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.

ಯೋಗೇಶ್ ತನ್ನ ಮೊದಲ ಪ್ರಯತ್ನದಲ್ಲೇ 42.22 ಮೀಟರ್ ದೂರ ಡಿಸ್ಕಸ್ ಎಸೆದು ಬೆಳ್ಳಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪದಕದೊಂದಿಗೆ ಭಾರತ 1 ಚಿನ್ನ, 3 ಬೆಳ್ಳಿ ಹಾಗೂ 4 ಕಂಚಿನ ಪದಕಗೊಳಿಂದಿಗೆ ಪದಕ ಪಟ್ಟಿಯಲ್ಲಿ 30ನೇ ಸ್ಥಾನವನ್ನು ಪಡೆದುಕೊಂಡಿದೆ. ಯೋಗೇಶ್‌ಗೆ ಪ್ಯಾರಾಲಿಂಪಿಕ್ಸ್‌ನಲ್ಲಿ ಇದು ಎರಡನೇ ಬೆಳ್ಳಿ ಪದಕವಾಗಿದ್ದು, ಅವರು 2021 ರಲ್ಲಿ ನಡೆದಿದ್ದ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲೂ ಬೆಳ್ಳಿ ಪದಕ ಗೆದ್ದಿದ್ದರು.

With sheer determination and unmatched skill, he’s clinched a Silver medal in the Men's Discus Throw F56 at the Paralympics 2024!

From relentless training to overcoming challenges, Yogesh’s journey is a true testament to the power of… pic.twitter.com/9zHnNSXm7a

— Kiren Rijiju (@KirenRijiju) September 2, 2024