ಮುಂಬೈ ತಂಡದ ಯುವ ಬ್ಯಾಟರ್ ಮುಶೀರ್ ಖಾನ್ ಗೆ ರಸ್ತೆ ಅಪಘಾತದಲ್ಲಿ ಗಂಭಿರ ಗಾಯಾವಾಗಿದೆ ಎಂದು ವರದಿಯಾಗಿದೆ. ತಂದೆ ನೌಶನ್ ಖಾನ್ ಅವರೊಂದಿಗೆ ವಾಹನದಲ್ಲಿ ಅಜಂಗಢದಿಂದ ಲಕ್ನೋಗೆ ಪ್ರಯಾಣಿಸುತ್ತಿದ್ದ ವೇಳೆ ರಸ್ತೆ ಅಪಘಾತ ಸಂಭವಿಸಿದ್ದು, ಈ ವೇಳೆ ಅವರ ಮೂಳೆ ಮುರಿತಕ್ಕೊಳಗಾಗಿದೆ. ಹೀಗಾಗಿ ಮುಂಬರುವ ಇರಾನಿ ಕಪ್ ಪಂದ್ಯಕ್ಕೆ ಮುಶೀರ್ ಖಾನ್ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.
ಮುಶೀರ್ ಖಾನ್ ಇತ್ತೀಚೆಗೆ ನಡೆದ ದುಲೀಪ್ ಟ್ರೋಫಿ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಈ ಅದ್ಭುತ ಪ್ರದರ್ಶನದ ಫಲವಾಗಿ ಅವರನ್ನು ಭಾರತ ಎ ತಂಡಕ್ಕೆ ಆಯ್ಕೆ ಮಾಡಲಾಗುತ್ತದೆ ಎಂದು ವರದಿಗಳಾಗಿದ್ದವು. ಅಲ್ಲದೆ ಮುಂಬರುವ ಇರಾನಿ ಕಪ್ ಪಂದ್ಯದಲ್ಲಿ ಮುಶೀರ್ ಖಾನ್ ಮುಂಬೈ ಪರ ಕಣಕ್ಕಿಳಿಯಬೇಕಿತ್ತು. ಆದರೀಗ ಗಾಯಗೊಂಡ ಕಾರಣ ಅವರು ಅಕ್ಟೋಬರ್ 1 ರಿಂದ ಶುರುವಾಗಲಿರುವ ಇರಾನಿ ಕಪ್ನಿಂದ ಹೊರಗುಳಿಯುವುದು ಬಹುತೇಕ ಖಚಿತ. ಅಲ್ಲದೆ ರಣಜಿ ಟೂರ್ನಿಯ ಆರಂಭಿಕ ಪಂದ್ಯಗಳಿಗೂ ಅವರು ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ.
Ad