ನೆನ್ನೆ ನಡೆದ ಪಂದ್ಯದಲ್ಲಿ ಝಿಂಬಾಬ್ವೆ ವಿರುದ್ಧ ಫೈಟ್‌ಕೊಟ್ಟರು ಕೊನೆಗೆ ಹಿನಾಯ ಸೋಲುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಝಿಂಬಾಬ್ವೆ ತಂಡವು 20 ಓವರ್ಗಳಲ್ಲಿ 115 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 19.5 ಓವರ್ಗಳಲ್ಲಿ 102 ರನ್ಗಳಿಸಿ ಆಲೌಟ್ ಆಯಿತು. ಈ ಮೂಲಕ ಝಿಂಬಾಬ್ವೆ 13 ರನ್ಗಳ ಜಯ ಸಾಧಿಸಿದೆ. ಇದೀಗ ಈ ಸರಣಿಯ 2ನೇ ಪಂದ್ಯಕ್ಕೆ ಉಭಯ ತಂಡಗಳು ಸಜ್ಜಾಗಿದೆ.
ಭಾನುವಾರ ನಡೆಯಲಿರುವ ಈ ಪಂದ್ಯ ಕೂಡ ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲೇ ಜರುಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ. ಅತ್ತ ಮೊದಲ ಪಂದ್ಯದಲ್ಲಿ ಗೆದ್ದು ಬೀಗಿರುವ ಝಿಂಬಾಬ್ವೆ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಳ್ಳುವ ತವಕದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.
ಯಾವ ಚಾನೆಲ್ನಲ್ಲಿ ನೇರ ಪ್ರಸಾರ?
ಭಾರತ ಮತ್ತು ಝಿಂಬಾಬ್ವೆ ಸರಣಿಯನ್ನು ಸೋನಿ ಸ್ಪೋರ್ಟ್ಸ್ ಚಾನೆಲ್ನಲ್ಲಿ ವೀಕ್ಷಿಸಬಹುದು. ಹಾಗೆಯೇ ಸೋನಿ ಲೈವ್ ಆ್ಯಪ್ನಲ್ಲೂ ಈ ಪಂದ್ಯದ ನೇರ ಪ್ರಸಾರ ಇರಲಿದೆ. ಈ ಪಂದ್ಯವು ಸಂಜೆ 4.30 ರಿಂದ ಶುರುವಾಗಲಿದೆ.

