Bengaluru 27°C
Ad

ಇಂದು ಯುವ ಭಾರತ ಟೀಮ್‌ ವಿರುದ್ಧ ಝಿಂಬಾಬ್ವೆ ಮೊದಲ ಟಿ20 ಪಂದ್ಯ

ಇಂದು ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿಯು ಶುರುವಾಗಲಿದೆ. ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ಸಂಜೆ 4.30 ರಿಂದ ಶುರುವಾಗಲಿದೆ. ಐದು ಪಂದ್ಯಗಳ ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಯುವ ಆಟಗಾರ ಶುಭ್​ಮನ್ ಗಿಲ್ ಮುನ್ನಡೆಸಲಿರುವುದು ವಿಶೇಷ.

ಇಂದು ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿಯು ಶುರುವಾಗಲಿದೆ. ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ಸಂಜೆ 4.30 ರಿಂದ ಶುರುವಾಗಲಿದೆ. ಐದು ಪಂದ್ಯಗಳ ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಯುವ ಆಟಗಾರ ಶುಭ್​ಮನ್ ಗಿಲ್ ಮುನ್ನಡೆಸಲಿರುವುದು ವಿಶೇಷ.

Ad
300x250 2

ಇನದನು ವಿಶ್ವಕಪ್‌ ಆಡಿರುವ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಹೀಗಾಗಿ ಝಿಂಬಾಬ್ವೆ ವಿರುದ್ಧದ ಸರಣಿಗೆ ಯಂಗ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ಅದರಂತೆ ಇದೇ ಮೊದಲ ಬಾರಿಗೆ ರಿಯಾನ್ ಪರಾಗ್, ಅಭಿಷೇಕ್ ಶರ್ಮಾ, ಹರ್ಷಿತ್ ರಾಣಾ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇನ್ನು ಟಿ20 ವಿಶ್ವಕಪ್​ ತಂಡದಲ್ಲಿ ಮೀಸಲು ಆಟಗಾರರಾಗಿ ಕಾಣಿಸಿಕೊಂಡಿದ್ದ ರಿಂಕು ಸಿಂಗ್ ಹಾಗೂ ಖಲೀಲ್ ಅಹ್ಮದ್ ಈ ಸರಣಿಯಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಹಾಗೆಯೇ ಮೂರನೇ ಪಂದ್ಯದ ವೇಳೆ ಸಂಜು ಸ್ಯಾಮ್ಸನ್, ಶಿವಂ ದುಬೆ ಹಾಗೂ ಯಶಸ್ವಿ ಜೈಸ್ವಾಲ್ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?
ಭಾರತ ಮತ್ತು ಝಿಂಬಾಬ್ವೆ ಸರಣಿಯನ್ನು ಸೋನಿ ಸ್ಪೋರ್ಟ್ಸ್ ಚಾನೆಲ್​ನಲ್ಲಿ ವೀಕ್ಷಿಸಬಹುದು. ಹಾಗೆಯೇ ಸೋನಿ ಲೈವ್ ಆ್ಯಪ್​ನಲ್ಲೂ ಈ ಪಂದ್ಯದ ನೇರ ಪ್ರಸಾರ ಇರಲಿದೆ. ಈ ಪಂದ್ಯವು ಸಂಜೆ 4.30 ರಿಂದ ಶುರುವಾಗಲಿದೆ.

ಭಾರತ ಟಿ20 ತಂಡ: ಶುಭ್​ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ , ಹರ್ಷಿತ್ ರಾಣಾ. (ಶಿವಂ ದುಬೆ, ಸಂಜು ಸ್ಯಾಮ್ಸನ್ ಹಾಗೂ ಯಶಸ್ವಿ ಜೈಸ್ವಾಲ್- ಉಳಿದ ಮೂರು ಪಂದ್ಯಗಳಿಗೆ).

Ad
Ad
Nk Channel Final 21 09 2023
Ad