Showing 20 of 609 posts • Page 2 of 31
ಏಪ್ರಿಲ್ 15 ರಂದು ಬೆಂಗಳೂರಿನಲ್ಲಿ ಆರ್ಸಿಬಿ ಮತ್ತು ಎಲ್ಎಸ್ಜಿ ನಡುವೆ ಐಪಿಎಲ್ 2026 ಪಂದ್ಯ ನಡೆಯಲಿದೆ.
ಎಸ್ಜೆಇಸಿ ಮಹಿಳಾ ಫುಟ್ಬಾಲ್ ತಂಡವು 2026 ಏಪ್ರಿಲ್ 11 ರಂದು ಮೈಸೂರಿನ ಎನ್ಐಇಯಲ್ಲಿ ನಡೆದ ವಿ.ಟಿ.ಯು ರಾಜ್ಯ ಮಟ್ಟದ ಮಹಿಳಾ ಫುಟ್ಬಾಲ್ ಟೂರ್ನಿಯಲ್ಲಿ ಭಾಗವಹಿಸಿ ರನ್ನರ್-ಅಪ್ ಟ್ರೋಫಿಯನ್ನು ಗೆದ್ದಿದೆ.
ಇಲ್ಲಿನ ಬರ್ಸಪರ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ರಾಜಸ್ಥಾನ ರಾಯಲ್ಸ್ ಹಾಗೂ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದು, ಟಾಸ್ ವಿಳಂಬವಾಗಿದೆ.
ಐಪಿಎಲ್ ಪಂದ್ಯಾವಳಿಯಲ್ಲಿ ಉತ್ತಮ ಫಾರ್ಮ್ನಲ್ಲಿರುವ 2 ತಂಡಗಳು ಶುಕ್ರವಾರ ಮುಖಾಮುಖಿಯಾಗುತ್ತಿದೆ. ಹಾಲಿ ಚಾಂಪಿಯನ್ ಆರ್ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸುತ್ತಿದೆ.
ಬ್ರೆಜಿಲ್ನ ಒಲಿಂಪಿಕ್ ಪಾರ್ಕ್ ವೆಲೊಡ್ರೋಮ್ನಲ್ಲಿ ಬುಧವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ. ಸುಮಾರು 80 ಅಗ್ನಿಶಾಮಕ ದಳದ ಸಿಬಂದಿಗಳು 20 ವಾಹನಗಳೊಂದಿಗೆ ತುರ್ತು ಕಾರ್ಯಾಚರಣೆ ನಡೆಸಿ ನಿಯಂತ್ರಣಕ್ಕೆ ತಂದಿದ್ದಾರೆ.
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) “ಗೋ ಫಾರ್ ಗೋಲ್ಡ್–2026” ಎಂಬ ತನ್ನ ವಾರ್ಷಿಕ ಅಥ್ಲೆಟಿಕ್ ಮೀಟ್ ಅನ್ನು 2026 ಏಪ್ರಿಲ್ 07 ರಂದು ಮಂಗಳವಾರ ಬೆಳಿಗ್ಗೆ 9:00 ಗಂಟೆಗೆ ಕಾಲೇಜಿನ ಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ ಆಚರಿಸಿತು. ಈ ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ವಿಭಾಗ ಹಾಗೂ ಸ್ಪೋರ್ಟ್ಸ್ & ವೆಲ್ನೆಸ್ ವಿಭಾಗ ಆಯೋಜಿಸಿತು.
ಐಪಿಎಲ್ ಪಂದ್ಯಗಳ ಟಿಕೆಟ್ ಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಅಕ್ರಮವಾಗಿ ಟಿಕೆಟ್ ಮಾರಾಟಕ್ಕಿಳಿದಿದ್ದ 11 ಮಂದಿಯನ್ನು ಬಂಧಿಸಿ, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಡ್ರಿಂಕ್ & ಡ್ರೈವ್ ಕೇಸಲ್ಲಿ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇವಿಡ್ ವಾರ್ನರ್ ನನ್ನು ಬಂಧಿಸಲಾಗಿದೆ.
ಆರ್ಸಿಬಿ ಹಾಗೂ ಸಿಎಸ್ಕೆ ತಂಡಗಳ ನಡುವಿನ ಐಪಿಎಲ್ ಕ್ರಿಕೆಟ್ ಪಂದ್ಯದ ಟಿಕೆಟ್ ಮಾರಾಟ ಮಾಡುವ ನೆಪದಲ್ಲಿ ದುಷ್ಕರ್ಮಿಗಳು ಆನ್ಲೈನ್ನಲ್ಲಿ ಟೆಕ್ಕಿಯೊಬ್ಬರಿಗೆ ₹1.45 ಲಕ್ಷ ವಂಚಿಸಿದ್ದಾರೆ.
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ CSK ವಿರುದ್ಧದ ಪಂದ್ಯದಲ್ಲಿ RCB ತಂಡವು ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ CSK ತಂಡವು ರೋಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತು.
ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಆರ್ಸಿಬಿ ವರ್ಸಸ್ ಸಿಎಸ್ಕೆ ಪಂದ್ಯದ ಐಪಿಎಲ್ ಟಿಕೆಟ್ ಪಡೆಯಲು ಹೋಗಿ ವಂಚನೆಗೊಳಗಾಗಿ ಟೆಕ್ಕಿಯೊಬ್ಬರು 1.46 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಮಹದೇವಪುರದಲ್ಲಿ ನಡೆದಿದೆ.
ಐಪಿಎಲ್ನ 2 ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಇಂದು ಬೆಂಗಳೂರಿನಲ್ಲಿ ಹಣಾಹಣಿಗೆ ಸಜ್ಜಾಗಿವೆ.
ಸನ್ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟಿಂಗ್ ಅಬ್ಬರಕ್ಕೆ ಕೋಲ್ಕತ್ತಾ ನೈಟ್ ರೈಡರ್ಸ್ ತತ್ತರಿಸಿದೆ. ಕೆಕೆಆರ್ ವಿರುದ್ಧ ಎಸ್ಆರ್ಹೆಚ್ 65 ರನ್ಗಳ ಭರ್ಜರಿ ಗೆಲುವು ದಾಖಲಿಸಿದೆ.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್ ಸ್ಟೂಡೆಂಟ್ಸ್ ಅಥ್ಲೆಟಿಕ್ ತಂಡವು 2026 ರ ಮಾರ್ಚ್ 26 ರಿಂದ 29 ರವರೆಗೆ ತಿಪಟೂರಿನ ಕೆಐಟಿಯಲ್ಲಿ ನಡೆದ ವಿಟಿಯು 27 ನೇ ಅಂತರ-ಕಾಲೇಜು ರಾಜ್ಯ ಮಟ್ಟದ ಅಥ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ 140 ಅಂಕಗಳನ್ನು ಗಳಿಸುವ ಮೂಲಕ 9 ನೇ ಬಾರಿಗೆ ಸಮಗ್ರ ಚಾಂಪಿಯನ್ಶಿಪ್ ಗೆದ್ದುಕೊಂಡಿತು. ಸಹ್ಯಾದ್ರಿ ರಾಜ್ಯ ಮಟ್ಟದ ಅಥ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕಗಳನ್ನು ಬಾಚಿಕೊಂಡಿದ್ದಾರ
ಆರ್ಸಿಬಿ ಮತ್ತು ಎಸ್ಆರ್ಎಚ್ ತಂಡಗಳ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದ ವೇಳೆ 20ಕ್ಕೂ ಹೆಚ್ಚು ಮೊಬೈಲ್ ಕಳ್ಳತನವಾಗಿದೆ. ಈ ಸಂಬಂಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ವರ್ಷ ಬೆಂಗಳೂರಿನಲ್ಲಿ ನಡೆದ ದುರದೃಷ್ಟಕರ ಕಾಲ್ತುಳಿತದ ಘಟನೆಯಲ್ಲಿ ಪ್ರಾಣ ಕಳೆದುಕೊಂಡ 11 ಮಂದಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳಿಗೆ ಐಪಿಎಲ್ 2026ರ ಪಂದ್ಯದ ವೇಳೆ ವಿಶೇಷ ಗೌರವ ಸಲ್ಲಿಸಲಾಯಿತು.
ಐಪಿಎಲ್ 2026ರ ಕಹಳೆ ಮೊಳಗುವ ಹೊತ್ತಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ. ತಂಡದ ಆಧಾರಸ್ತಂಭ, ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ಎಂ.ಎಸ್. ಧೋನಿ ಅವರು ಕಾಲಿನ ಸ್ನಾಯು ಸೆಳೆತದಿಂದ ಬಳಲುತ್ತಿದ್ದು, ಕನಿಷ್ಠ ಎರಡು ವಾರಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ.
ದಾಖಲೆಯ ಐಪಿಎಲ್ ಒಪ್ಪಂದದಲ್ಲಿ 16,000 ಕೋಟಿ ರೂ.ಗೂ ಹೆಚ್ಚು ಬೆಲೆಗೆ ಮಾರಾಟವಾಗಿದೆ. ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟವು ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಸ್ವಾಧೀನವನ್ನು ಪೂರ್ಣಗೊಳಿಸಿತು.
ಐಪಿಎಲ್ 2026 ಮಾರ್ಚ್ 28ರಿಂದ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಣಕ್ಕಿಳಿಯಲಿದೆ. ಸೀಸನ್ ಆರಂಭಕ್ಕೂ ಮೊದಲು BCCI ಕೆಲವು ಪ್ರಮುಖ ನಿಯಮ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ಇದು ಈ ಬಾರಿ ಟೂರ್ನಿಯ ಮೇಲೆ ಸಾಕಷ್ಟು ಪ್ರಭಾವ ಬೀರುವ ನಿರೀಕ್ಷೆ ಇದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವೇಗದ ಬೌಲರ್ ಯಶ್ ದಯಾಳ್ ಅವರು ಪ್ರಸಕ್ತ ಸಾಲಿನ ಐಪಿಎಲ್ ತಂಡವನ್ನು ಸೇರಿಕೊಳ್ಳುತ್ತಿಲ್ಲ ಎಂದು ಆರ್ಸಿಬಿಯ ಕ್ರಿಕೆಟ್ ನಿರ್ದೇಶಕ ಮೊ ಬೊಬಾಟ್ ಖಚಿತಪಡಿಸಿದ್ದಾರೆ.