Showing 20 of 674 posts • Page 6 of 34
ಕಳೆದ ವರ್ಷ ಬೆಂಗಳೂರಿನಲ್ಲಿ ನಡೆದ ದುರದೃಷ್ಟಕರ ಕಾಲ್ತುಳಿತದ ಘಟನೆಯಲ್ಲಿ ಪ್ರಾಣ ಕಳೆದುಕೊಂಡ 11 ಮಂದಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳಿಗೆ ಐಪಿಎಲ್ 2026ರ ಪಂದ್ಯದ ವೇಳೆ ವಿಶೇಷ ಗೌರವ ಸಲ್ಲಿಸಲಾಯಿತು.
ಐಪಿಎಲ್ 2026ರ ಕಹಳೆ ಮೊಳಗುವ ಹೊತ್ತಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ. ತಂಡದ ಆಧಾರಸ್ತಂಭ, ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ಎಂ.ಎಸ್. ಧೋನಿ ಅವರು ಕಾಲಿನ ಸ್ನಾಯು ಸೆಳೆತದಿಂದ ಬಳಲುತ್ತಿದ್ದು, ಕನಿಷ್ಠ ಎರಡು ವಾರಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ.
ದಾಖಲೆಯ ಐಪಿಎಲ್ ಒಪ್ಪಂದದಲ್ಲಿ 16,000 ಕೋಟಿ ರೂ.ಗೂ ಹೆಚ್ಚು ಬೆಲೆಗೆ ಮಾರಾಟವಾಗಿದೆ. ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟವು ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಸ್ವಾಧೀನವನ್ನು ಪೂರ್ಣಗೊಳಿಸಿತು.
ಐಪಿಎಲ್ 2026 ಮಾರ್ಚ್ 28ರಿಂದ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಣಕ್ಕಿಳಿಯಲಿದೆ. ಸೀಸನ್ ಆರಂಭಕ್ಕೂ ಮೊದಲು BCCI ಕೆಲವು ಪ್ರಮುಖ ನಿಯಮ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ಇದು ಈ ಬಾರಿ ಟೂರ್ನಿಯ ಮೇಲೆ ಸಾಕಷ್ಟು ಪ್ರಭಾವ ಬೀರುವ ನಿರೀಕ್ಷೆ ಇದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವೇಗದ ಬೌಲರ್ ಯಶ್ ದಯಾಳ್ ಅವರು ಪ್ರಸಕ್ತ ಸಾಲಿನ ಐಪಿಎಲ್ ತಂಡವನ್ನು ಸೇರಿಕೊಳ್ಳುತ್ತಿಲ್ಲ ಎಂದು ಆರ್ಸಿಬಿಯ ಕ್ರಿಕೆಟ್ ನಿರ್ದೇಶಕ ಮೊ ಬೊಬಾಟ್ ಖಚಿತಪಡಿಸಿದ್ದಾರೆ.
ಬೆಂಗಳೂರು: ಆರ್ಸಿಬಿ ಅಭಿಮಾನಿಗಳಿಗೆ ಗುಡ್ನ್ಯೂಸ್ ಸಿಕ್ಕಿದೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಗಳ ಟಿಕೆಟ್ ಹೊಂದಿರುವವರಿಗೆ ಉಚಿತ ಮೆಟ್ರೋ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಈ ಸಂಬಂಧ ಆರ್ಸಿಬಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದೆ. ಇದೇ ಮಾರ್ಚ್ 28 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಸ್ಆರ್ಹೆಚ್ ವಿರುದ್ಧ ಆರ್ಸಿಬಿ ಉದ್ಘಾಟನಾ ಪಂದ್ಯವನ್ನು ಆಡಲಿದೆ. ಅಲ್ಲದೇ, ಏಪ್ರಿಲ್ 5 ರಂದು ಸಿಎಸ್ಕೆ ವಿರುದ್ಧ ಇದೇ ಕ್ರೀಡಾಂಗಣದಲ್ಲಿ ಸೆಣಸಲಿದೆ. ತವರಿನಲ್ಲಿ ಎರಡು ಪಂದ್ಯಗಳನ್ನು ಆರ್ಸಿಬಿ ಆಡಲಿದೆ. ಪಂದ್ಯದ ಟಿಕೆಟ್ ತೋರಿಸುವ […]
ಎಂ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಐಪಿಎಲ್ ನ ಆರ್ ಸಿಬಿ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಸರ್ಕಾರ ಕೊನೆಗೂ ಗ್ರೀನ್ ಸಿಗ್ನಲ್ ನೀಡಿದೆ.
2026 ರ ಐಸಿಸಿ ಟಿ20 ವಿಶ್ವಕಪ್ ಗೆದ್ದ ನಂತರ ಸಂಭ್ರಮಾಚರಣೆ ವೇಳೆ ಟೀಂ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ವಕೀಲರೊಬ್ಬರು ಮುಂಬೈನಲ್ಲಿ ದೂರು ದಾಖಲಿಸಿದ್ದಾರೆ.
ಕರ್ನಾಟಕ ಸಂಘ ದುಬೈ (ಕೆಎಸ್ಡಿ) ಕಾರ್ಯದರ್ಶಿ ಮನೋಹರ್ ಹೆಗ್ಡೆ ಅವರು ಮಾರ್ಚ್ 9 ರಿಂದ ಮಾರ್ಚ್ 14, 2026 ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ 34 ನೇ ಭಾರತ ರಾಷ್ಟ್ರೀಯ ಟೆನ್ಪಿನ್ ಬೌಲಿಂಗ್ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ಅರ್ಹತೆ ಪಡೆದಿದ್ದಾರೆ. ಅವರು ಚಾಂಪಿಯನ್ಶಿಪ್ನಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ನಿಂದ ಪ್ರತಿನಿಧಿಸುವ ಏಕೈಕ ಕನ್ನಡಿಗರಾಗಿದ್ದಾರೆ.
2026ರ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ಭಾರತೀಯ ತಂಡಕ್ಕೆ 131 ಕೋಟಿ ರೂಪಾಯಿ ನಗದು ಬಹುಮಾನವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘೋಷಿಸಿದೆ.
ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ ಭಾನುವಾರ ಡ್ರೆಸ್ಸಿಂಗ್ ರೂಮ್ನಲ್ಲಿರುವ ಜನರಿಗೆ ಮಾತ್ರ ಜವಾಬ್ದಾರನಾಗಿರುತ್ತೇನೆ ಎಂದು ಹೇಳಿದ್ದಾರೆ ಮತ್ತು ಭಾರತದ ಯಶಸ್ವಿ ಟಿ20 ವಿಶ್ವಕಪ್ ಟೈಲ್ ಡಿಫೆನ್ಸ್ ಅನ್ನು ದಿಗ್ಗಜರಾದ ರಾಹುಲ್ ದ್ರಾವಿಡ್ ಮತ್ತು ವಿವಿಎಸ್ ಲಕ್ಷ್ಮಣ್ಗೆ ಅರ್ಪಿಸಿದ್ದಾರೆ.
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಝಿಲೆಂಡ್ ಸೋಲಿಸಿ ಮೂರನೇ ಬಾರಿಗೆ ಟಿ20 ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ.
2026 ರ ಟಿ20 ವಿಶ್ವಕಪ್ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ಸಂಜೆ 7 ಗಂಟೆಗೆ ಆರಂಭವಾಗಲಿದೆ.
ನಾಳೆ ನಡೆಯಲಿರುವ ಟಿ20 ವಿಶ್ವಕಪ್ ಫಿನಾಲೆ ಪಂದ್ಯದ ಹಿನ್ನೆಲೆ ನವದೆಹಲಿಯಿಂದ ಅಹಮದಾಬಾದ್ಗೆ ವಿಶೇಷ ರೈಲು ಸಂಚರಿಸಲಿದೆ.
ಮಾಜಿ ಭಾರತೀಯ ಕ್ರಿಕೆಟಿಗ ಶಿಖರ್ ಧವನ್, ಮಾಜಿ ಪತ್ನಿಗೆ ಆಸ್ಟ್ರೇಲಿಯಾದ ಆಸ್ತಿ ಇತ್ಯರ್ಥದಿಂದ ಪಡೆದ 5.7 ಕೋಟಿ ರೂ. ಹಿಂದಿರುಗಿಸುವಂತೆ ಆದೇಶ!
ಬಹು ನಿರೀಕ್ಷಿತ ವನಿತಾ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಜೂ.12ರಿಂದ ಜು.5ರವರೆಗೆ ಇಂಗ್ಲೆಂಡ್ನಲ್ಲಿ ಟೂರ್ನಿ ನಡೆಯಲಿದೆ. ಒಟ್ಟು 12 ತಂಡಗಳು ಟ್ರೋಫಿಗಾಗಿ ಸೆಣಸಾಡಲಿದ್ದು, ಲಂಡನ್ನಲ್ಲಿ ಫೈನಲ್ ಸಮರ ಸಾಗಲಿದೆ.
ಟಿ20 ವಿಶ್ವಕಪ್ನ ರಣ ರೋಚಕ ಪಂದ್ಯ ಭಾರತ vs ಪಾಕಿಸ್ತಾನ ನಡುವಿನ ಕಾದಾಟಕ್ಕೆ ಕ್ಷಣಗಣನೆ ಆರಂಭಗೊಂಡಿದೆ.
ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ ಪಂದ್ಯ ಆಯೋಜಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಒಂದು ಪಂದ್ಯಕ್ಕೆ 35 ಸಾವಿರಕ್ಕಿಂತ ಹೆಚ್ಚು ಜನ ಸೇರಬಾರದು ಎಂಬ ಷರತ್ತು ವಿಧಿಸಲಾಗಿದೆ.
T20 ವಿಶ್ವಕಪ್ ಸಮಯದಲ್ಲಿ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಉಳಿದ ಪಾನೀಯಗಳನ್ನು ಮರುಬಳಕೆ ಮಾಡಲಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಭಾರಿ ವಿವಾದ ಸೃಷ್ಟಿಸಿದೆ.
2026ರ ಟಿ20 ವಿಶ್ವಕಪ್ ಕದನ ಈಗಾಗಲೇ ರಂಗೇರಿದ್ದು, ಫೆ.15 ಭಾರತ & ಪಾಕಿಸ್ತಾನ ನಡುವೆ ಐಸಿಸಿ ಟಿ20 ವಿಶ್ವಕಪ್ ನಡೆಯಲಿದೆ. ಈ ಬಗ್ಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ನಿಮಗೆ ನಾಚಿಕೆ ಮಾನ, ಮರ್ಯಾದೆ ಇದ್ರೆ ಭಾರತ-ಪಾಕ್ ಕ್ರಿಕೆಟ್ ಪಂದ್ಯ ಬಹಿಷ್ಕರಿಸಿ ಅಂತ ಆಗ್ರಹಿಸಿದ್ದಾರೆ.