ಅಂಗನವಾಡಿ ಛಾವಣಿ ಕುಸಿತವಾದ ಪರಿಣಾಮ ನಾಲ್ಕು ಮಕ್ಕಳು ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬಂಡಿಗೆರೆ ಗ್ರಾಮದಲ್ಲಿ ನಡೆದಿದೆ.
ಬಸ್ಸಿನಡಿಗೆ ಬಿದ್ದ ಸೈಕಲ್ ಸವಾರ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ, ಪವಾಡ ಸದೃಶವಾಗಿ ಪಾರಾದ ಘಟನೆ ಕುಂದಾಪುರದ ಶಾಸ್ತ್ರಿ ಸರ್ಕಲ್ ಬಳಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆ…
ಹಾಸನಾಂಬೆ ಉತ್ಸವದ 8ನೇ ದಿನವಾಗಿರುವ ಇಂದು ಬ್ಯಾರಿಕೇಡ್ ಗಳಲ್ಲಿ ವಿದ್ಯುತ್ ಪ್ರವಹಿಸಿದ ಘಟನೆ ನಡೆದಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಬೆಂಗಳೂರು ಜೆಪಿನಗರದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿರೋ ಘಟನೆ ನಡೆದಿದೆ. ಅದೃಷ್ಟವಶಾತ್ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಲಕ್ರೀಡೆಯಲ್ಲಿ ತೊಡಗಿದ್ದ ಬೆಂಗಳೂರು ಮೂಲದ ಆರು ಮಂದಿ ಪ್ರಾಣಾಪಾಯದಿಂದ ಪಾರಾದ ಘಟನೆ ಚಾಮರಾಜನಗರ ಜಿಲ್ಲೆಯ ಶಿವನ ಸಮುದ್ರ ಬಳಿ ನಡೆದಿದೆ.
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕರಿಬ್ಬರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಬೆಂಕ್ಯ ಎಂಬಲ್ಲಿ…
ತಾನು ೩ ಬಾರಿ ಶಾಸಕನಾಗಿದ್ದೇನೆ. ಹುದ್ದೆಯಲ್ಲಿದ್ದಾಗಲೇ ೩ ಅಪಘಾತ, ಪ್ರಾಣಾಪಾಯ ಸಂಕಷ್ಟದಿಂದ ಪಾರಾಗಿದ್ದೇನೆಂದು ಶಾಸಕ ಎಂ.ಪಿ.ಕುಮಾರಸ್ವಾಮಿ ತಿಳಿಸಿದರು.
ಎರಡು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ರಸ್ತೆಯ ಪೊನ್ನಾಚಿ ಕ್ರಾಸ್ ಎರಡನೇ ತಿರುವಿನಲ್ಲಿ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ದೆಹಲಿಯ ಭಜನ್ಪುರ ಪ್ರದೇಶದ ಮನೆಯೊಂದಕ್ಕೆ ಮೂವರು ಮುಸುಕುಧಾರಿಗಳು ಬೆಂಕಿ ಹಚ್ಚಿದ್ದು, ನಿವಾಸಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.