ಆಧಾರ್ ಬಯೋಮೆಟ್ರಿಕ್ ಡೇಟಾವನ್ನು ಲಾಕ್ ಮಾಡುವುದು ಹೇಗೆ?

ಆಧಾರ್ ಕಾರ್ಡ್ ಬೆರಳಚ್ಚುಗಳು, ಐರಿಸ್ ಮತ್ತು ಮುಖದ ಚಿತ್ರಗಳಂತಹ ಬಯೋಮೆಟ್ರಿಕ್‌ಗಳಂತಹ ಪ್ರಮುಖ ವೈಯಕ್ತಿಕ ಮಾಹಿತಿಯನ್ನು ಸಹ ಒಳಗೊಂಡಿದೆ. ಸೈಬರ್ ಅಪರಾಧಿಗಳು ಮತ್ತು ವಂಚಕರು ಮೋಸದ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಬಯೋಮೆಟ್ರಿಕ್ ವಿವರಗಳನ್ನು ದುರುಪಯೋಗಪಡಿಸಿಕೊಳ್ಳಬಹುದು. ಇದನ್ನು ತಪ್ಪಿಸಲು ಆಧಾರ್ ಪ್ರಾಧಿಕಾರವು ಉಪಯುಕ್ತ ಸೌಲಭ್ಯವನ್ನು ಒದಗಿಸುತ್ತದೆ.

ಬಯೋಮೆಟ್ರಿಕ್ ಲಾಕಿಂಗ್/ಅನ್‌ಲಾಕಿಂಗ್ ಎನ್ನುವುದು ಆಧಾರ್ ಹೊಂದಿರುವವರು ತಮ್ಮ ಬಯೋಮೆಟ್ರಿಕ್‌ಗಳನ್ನು ಲಾಕ್ ಮಾಡಲು ಮತ್ತು ತಾತ್ಕಾಲಿಕವಾಗಿ ಅನ್‌ಲಾಕ್ ಮಾಡಲು ಅನುಮತಿಸುವ ವೈಶಿಷ್ಟ್ಯವಾಗಿದೆ.

ನಿಮ್ಮ ಆಧಾರ್ ಬಯೋಮೆಟ್ರಿಕ್ ಅನ್ನು ಲಾಕ್ ಮಾಡಲು, ನೀವು ಆಧಾರ್ ನೋಂದಣಿ ಕೇಂದ್ರಕ್ಕೆ ಭೇಟಿ ನೀಡಬಹುದು ಅಥವಾ ಆನ್‌ಲೈನ್ ಆಧಾರ್ ಪೋರ್ಟಲ್ ಅನ್ನು ಬಳಸಬಹುದು. ಆನ್‌ಲೈನ್ ಪೋರ್ಟಲ್ ಮೂಲಕ ನೀವು ಹೇಗೆ ನಿಮ್ಮ ಆಧಾರ್ ಬಯೋಮೆಟ್ರಿಕ್ ಅನ್ನು ಲಾಕ್ ಮಾಡಬಹುದು ಎಂಬುದರ ಬಗ್ಗೆ ಇಲ್ಲಿ ತಿಳಿಸಲಾಗಿದೆ.

UIDAI ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ : https://uidai.gov.in/ಗೆ ಭೇಟಿ ನೀಡುವ ಮೂಲಕ ಅಧಿಕೃತ UIDAI ವೆಬ್‌ಸೈಟ್ ಅನ್ನು ಪ್ರವೇಶಿಸಬಹುದು

UIDAI ಮುಖಪುಟದಲ್ಲಿ “ಲಾಕ್/ಅನ್‌ಲಾಕ್ ಬಯೋಮೆಟ್ರಿಕ್ಸ್” ಎಂಬ ಆಯ್ಕೆ ಕಾಣಿಸುತ್ತದೆ. ಮುಂದುವರಿಯಲು ಈ ಆಯ್ಕೆಯನ್ನು ಕ್ಲಿಕ್ ಮಾಡಿ

ಗೊತ್ತುಪಡಿಸಿದ ಜಾಗದಲ್ಲಿ ನಿಮ್ಮ 12-ಅಂಕಿಯ ಆಧಾರ್ ಸಂಖ್ಯೆಯನ್ನು ನಮೂದಿಸಿ

ಪುಟದಲ್ಲಿ ಕಾಣಿಸುವ ಭದ್ರತಾ ಕೋಡ್‌ ಅನ್ನು ನಮೂದಿಸುವ ಮೂಲಕ ಹ್ಯುಮನ್ ಯೂಸರ್ ಸ್ಟೇಟಸ್‌ ಅನ್ನು ವೆರಿಫೈ ಮಾಡಿ

ಜನರೇಟ್ ಒಟಿಪಿ ಆಯ್ಕೆ ಅಲ್ಲಿ ನಿಮಗೆ ಕಾಣಿಸುತ್ತದೆ. ಇದನ್ನು ಕ್ಲಿಕ್ ಮಾಡಿ. ಆಗ ನಿಮ್ಮ ರಿಜಿಸ್ಟರ್ ಆದ ಮೊಬೈಲ್ ಫೋನ್‌ ಸಂಖ್ಯೆಗೆ ಒಟಿಪಿ ಕಳುಹಿಸಿಕೊಡಲಾಗುತ್ತದೆ.

ನಿಮ್ಮ ಮೊಬೈಲ್ ಫೋನ್‌ಗೆ ಬಂದ ಒಟಿಪಿಯನ್ನು UIDAI ವೆಬ್‌ಸೈಟ್‌ನಲ್ಲಿ ನಮೂದಿಸಿ.

ಒಟಿಪಿ ನಮೂದಿಸಿದ ನಂತರ ನಿಮ್ಮ ಬಯೋಮೆಟ್ರಿಕ್ಸ್ ಅನ್ನು ಲಾಕ್ ಮಾಡುವ ಆಯ್ಕೆ ಕಾಣಿಸುತ್ತದೆ. ಈ ವೈಶಿಷ್ಟ್ಯವನ್ನು ಸಕ್ರಿಯಗೊಳಿಸಲು `ಲಾಕ್’ ಬಟನ್ ಮೇಲೆ ಕ್ಲಿಕ್ ಮಾಡಿ

Ramya Bolantoor

Recent Posts

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

13 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

8 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

8 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

8 hours ago