ಮೊಟೊರೊಲಾ ಮೊಬೈಲ್ ಕಂಪನಿಯ ನೂತನ ಮೊಟೊರೊಲಾ ಎಡ್ಜ್ 50 ಪ್ರೊ ಸ್ಮಾರ್ಟ್ಫೋನ್ ದೇಶಿಯ ಮಾರುಕಟ್ಟೆಯಲ್ಲಿ ಇಂದು (ಏಪ್ರಿಲ್ 3 ರಂದು) ಅಧಿಕೃತವಾಗಿ ಎಂಟ್ರಿ ಕೊಡಲಿದೆ. ಈ ಹೊಸ ಸ್ಮಾರ್ಟ್ಫೋನ್ ಮೀಡ್ರೇಂಜ್ ಪ್ರೈಸ್ ಟ್ಯಾಗ್ ಪಡೆದಿರುವ ನಿರೀಕ್ಷೆಗಳು ಇದ್ದು, ಕೆಲವು ಅತ್ಯಾಕರ್ಷಕ ಫೀಚರ್ಸ್ಗಳ ಮೂಲಕ ಗಮನ ಸೆಳೆದಿದೆ.
ಮೊಟೊರೊಲಾ ಎಡ್ಜ್ 50 ಪ್ರೊ ಮೊಬೈಲ್ ಭಾರತೀಯ ಮಾರುಕಟ್ಟೆಯಲ್ಲಿ ನಾಳೆ ಲಾಂಚ್ ಆಗಲಿದೆ. ಈ ಮೊಬೈಲ್ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದು, ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 7 ಜೆನ್ 3 SoC ಪ್ರೊಸೆಸರ್ ಪವರ್ ಪಡೆದಿದೆ.
ಮೊಟೊರೊಲಾ ಎಡ್ಜ್ 50 ಪ್ರೊ ಮೊಬೈಲ್ 6.7 ಇಂಚಿನ ಫುಲ್ ಹೆಚ್ಡಿ ಪ್ಲಸ್ ಡಿಸ್ಪ್ಲೇ ಒಳಗೊಂಡಿರಲಿದ್ದು, ಈ ಡಿಸ್ಪ್ಲೇಯು 1200 x 2780 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಪೋರ್ಟ್ ಪಡೆದಿರುತ್ತದೆ. ಇದಲ್ಲದೆ ಡಿಸ್ಪ್ಲೇ 144 ಟ್ರೂ ಕಲರ್ ಡಿಸ್ಪ್ಲೇ ಸೌಲಭ್ಯ ಒಳಗೊಂಡಿರಲಿದ್ದು, ಹಾಗೆಯೇ ಇದರ ಡಿಸ್ಪ್ಲೇ 2000 ನಿಟ್ಸ್ ಬ್ರೈಟ್ನೆಸ್ ಬೆಂಬಲ ಇರಲಿದೆ. ಅಲ್ಲದೇ 3D ಕರ್ವ್ ಡಿಸ್ಪ್ಲೇ ರಚನೆ ಅನ್ನು ಪಡೆದಿರಲಿದೆ.
ಮೊಟೊರೊಲಾದ ಈ ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 7 ಜೆನ್ 3 SoC ಪ್ರೊಸೆಸರ್ ಬಲವನ್ನು ಒಳಗೊಂಡಿರಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಇರಲಿದೆ. ಇದರೊಂದಿಗೆ 12 GB RAM ಮತ್ತು 256 GB ಆಂತರೀಕ ಸ್ಟೋರೇಜ್ ಆಯ್ಕೆ ಒಳಗೊಂಡಿರಲಿದೆ.
ಇನ್ನು ಈ ನೂತನ 5G ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ಅಪ್ ಸೌಲಭ್ಯ ಪಡೆದಿರಲಿದ್ದು, ಇದಕ್ಕೆ ಪೂರಕವಾಗಿ 125W ಫಾಸ್ಟ್ ಟರ್ಬೋ ಚಾರ್ಜಿಂಗ್ ಆಯ್ಕೆ ಇರಲಿದೆ ಎಂದು ತಿಳಿದು ಬಂದಿದೆ.