ಪೋಕೋ M6 ಪ್ರೊ 5G ಹೊಸ ರೂಪಾಂತರ ಬಿಡುಗಡೆ

ಪೋಕೋ ಸಂಸ್ಥೆಯ ಸ್ಮಾರ್ಟ್​ಫೋನ್​​ಗಳಿಗೆ ಭಾರತದಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ಪೋಕೋ, ಕಳೆದ ತಿಂಗಳು ದೇಶದಲ್ಲಿ ಹೊಸ ಪೋಕೋ M6 ಪ್ರೊ (Poco M6 Pro 5G) ಎಂಬ 5ಜಿ ಫೋನನ್ನು ಅನಾವರಣ ಮಾಡಿತ್ತು. ಬಿಡುಗಡೆ ಆದ ಸಮಯದಲ್ಲಿ ಈ ಸ್ಮಾರ್ಟ್​ಫೋನ್ ಕೇವಲ ಎರಡು RAM/ಸ್ಟೋರೇಜ್ ಮಾದರಿಗಳಲ್ಲಿ ಮಾತ್ರ ನೀಡಲಾಗಿತ್ತು. ಇದೀಗ ಈ ಫೋನಿಗೆ ಭರ್ಜರಿ ಬೇಡಿಕೆ ಇರುವ ಕಾರಣ 4GB + 128GB ರೂಪಾಂತರವನ್ನು ಪರಿಚಯಿಸಿದೆ.

ಪೋಕೋ M6 ಪ್ರೊ 5G ಸ್ಮಾರ್ಟ್​ಫೋನ್​ನ ನೂತನ ರೂಪಾಂತರ 4GB RAM + 128GB ಸ್ಟೋರೇಜ್ ಮಾದರಿಗೆ ಕೇವಲ 11,999 ರೂ. ನಿಗದಿ ಮಾಡಲಾಗಿದೆ. ಈ ಹಿಂದೆ 4GB RAM + 64GB ಮತ್ತು 6GB RAM + 128GB ರೂಪಾಂತರಗಳು ಬಿಡುಗಡೆ ಆಗಿತ್ತು. ಇವುಗಳ ಬೆಲೆ ಕ್ರಮವಾಗಿ 10,999 ಮತ್ತು 12,999 ರೂ. ಆಗಿದೆ. ಹೊಸ ರೂಪಾಂತರವು ಈಗಾಗಲೇ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ ಮೂಲಕ ಖರೀದಿಗೆ ಲಭ್ಯವಿದೆ.

ಪೋಕೋ M6 ಪ್ರೊ 5G ಫೋನ್ 90Hz ರಿಫ್ರೆಶ್ ರೇಟ್‌ನೊಂದಿಗೆ 6.79-ಇಂಚಿನ FHD+ ಡಿಸ್ ಪ್ಲೇ, 240Hz ಟಚ್ ಸ್ಯಾಂಪ್ಲಿಂಗ್ ದರ ಮತ್ತು ಗೊರಿಲ್ಲಾ ಗ್ಲಾಸ್ 3 ರಕ್ಷಣೆಯನ್ನು ಪಡೆದುಕೊಂಡಿದೆ.

ಈ ಸ್ಮಾರ್ಟ್​ಫೋನ್ 18W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ.

ಪೋಕೋ M6 ಪ್ರೊ 5G ಫೋನ್ 50MP ಪ್ರಾಥಮಿಕ ಸಂವೇದಕವನ್ನು ಮತ್ತು ಹಿಂಭಾಗದಲ್ಲಿ 2MP ಡೆಪ್ತ್ ಸಂವೇದಕವನ್ನು ಹೊಂದಿದೆ. ಸೆಲ್ಫಿಗಾಗಿ ಮುಂಭಾಗದಲ್ಲಿ 8MP ಕ್ಯಾಮೆರಾ ಅಳವಡಿಸಲಾಗಿದೆ.

 

 

Ashitha S

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

1 hour ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

1 hour ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

2 hours ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

2 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

2 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

2 hours ago