ಅಗ್ಗದ ಬೆಲೆಯಲ್ಲಿ ರಿಯಲ್‌ಮಿ 12X 5G ಲಾಂಚ್‌

ರಿಯಲ್‌ಮಿ ಮೊಬೈಲ್‌ ಸಂಸ್ಥೆಯ ಬಹುನಿರೀಕ್ಷಿತ ರಿಯಲ್‌ಮಿ 12X 5G ಸ್ಮಾರ್ಟ್‌ಫೊನ್‌ ಇಂದು ಭಾರತದಲ್ಲಿ ಅಧಿಕೃತವಾಗಿ ಲಾಂಚ್ ಆಗಿದೆ. ಈ ನೂತನ ಫೋನ್‌ ಸ್ಟೈಲಿಶ್‌ ಡಿಸೈನ್‌ ಪಡೆದಿದ್ದು, ಎಂಟ್ರಿ ಲೆವೆಲ್‌ 5G ಕಿಲ್ಲರ್‌ ನಂತಹ ಫೀಚರ್ಸ್‌ ಸೂಚಿಸಿದೆ. ಅಂದಹಾಗೆ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್‌ ಸೌಲಭ್ಯ ಪಡೆದಿದೆ.

ರಿಯಲ್‌ಮಿ ಸಂಸ್ಥೆಯು ಇಂದು ರಿಯಲ್‌ಮಿ 12X 5G ಮೊಬೈಲ್‌ ಅನ್ನು ಇಂದು ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಇದು ಎಂಟ್ರಿ ಲೆವೆಲ್‌ 5G ಸ್ಮಾರ್ಟ್‌ಫೋನ್‌ ಆಗಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸಲ್‌ AI ಕ್ಯಾಮೆರಾ ಸೆನ್ಸಾರ್‌ ಪಡೆದಿದೆ. ಅಲ್ಲದೇ 45W ಫಾಸ್ಟ್‌ ಚಾರ್ಜಿಂಗ್‌ ಇದರ ಹೈಲೈಟ್‌ ಅಂಶಗಳಲ್ಲಿ ಒಂದಾಗಿದೆ.

ಅಲ್ಲದೇ ಈ ಫೋನ್‌ ಏರ್‌ ಗೆಸ್ಚರ್‌ ಸೌಲಭ್ಯ ಕೂಡಾ ಪಡೆದಿದ್ದು, IP54 ರೇಟಿಂಗ್‌ ಆಯ್ಕೆ ಕೂಡಾ ಪಡೆದಿದೆ. ಅಂದಹಾಗೆ ಈ ಫೋನಿನ ಆರಂಭಿಕ ಬೆಲೆ 11,999ರೂ.

ರಿಯಲ್‌ಮಿ 12X 5G ಮೊಬೈಲ್‌ 6.72 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ರಚನೆ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇಯು 1080×2400 ಪಿಕ್ಸಲ್‌ ರೆಸಲ್ಯೂಶನ್‌ ಸೌಲಭ್ಯ ಪಡೆದಿದೆ. ಅಲ್ಲದೇ ಇದು 120Hz ರಿಫ್ರೆಶ್‌ ರೇಟ್‌ ಆಯ್ಕೆ ಒಳಗೊಂಡಿದೆ. 4GB/6GB/8GB RAM ವೇರಿಯಂಟ್‌ ಆಯ್ಕೆಗಳಲ್ಲಿ ಇದು ಲಭ್ಯವಿದೆ.

ಇದರೊಂದಿಗೆ 8GB ಡೈನಾಮಿಕ್ RAM ಸೌಲಭ್ಯ ಸಹ ಸಿಗಲಿದೆ.

ಹಾಗೆಯೇಈ ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಆಗಿದೆ. ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಸೆನ್ಸಾರ್‌ ರಚನೆ ಪಡೆದಿದೆ. ಇನ್ನು ಮುಂಭಾಗದಲ್ಲಿ ಈ ಫೋನ್‌ 8 ಮೆಗಾ ಪಿಕ್ಸಲ್‌ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. 1080P@30fps ಸಪೋರ್ಟ್‌ನಲ್ಲಿ ವಿಡಿಯೋ ರೆಕಾರ್ಡಿಂಗ್‌ ಮಾಡಬಹುದು.

ಇನ್ನು ಆರಂಭಿಕ 4GB+128GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 11,999ರೂ. ಆಗಿದೆ. 6GB+128GB ವೇರಿಯಂಟ್‌ ದರವು 13,499ರೂ. ಆಗಿದ್ದು, 8GB+128GB ವೇರಿಯಂಟ್‌ ಬೆಲೆಯು 14,999ರೂ. ಗಳು ಆಗಿದೆ.

Ashitha S

Recent Posts

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

10 mins ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

29 mins ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

55 mins ago

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

1 hour ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

1 hour ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

2 hours ago