ಜಮ್ಮು ಕಾಶ್ಮೀರ: ಅಮರನಾಥ ಯಾತ್ರೆ ಮುಗಿಸಿ ಪಂಜಾಬ್​ನ ಹೋಶಿಯಾರ್​ಪುರಕ್ಕೆ ಹಿಂದಿರುಗುತ್ತಿರುವಾಗ ಬಸ್​ನ ಬ್ರೇಕ್​ ಫೇಲ್​ ಆದ ಪರಿಣಾಮ ಯಾತ್ರಿಕರು ಬಸ್​ನಿಂದ ಹಾರಿ ಗಾಯಗೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಪಂಜಾಬ್‌ನ ಹೋಶಿಯಾರ್‌ಪುರಕ್ಕೆ ಹಿಂತಿರುಗುತ್ತಿದ್ದ ಸುಮಾರು 40 ಯಾತ್ರಾರ್ಥಿಗಳನ್ನು ಹೊತ್ತ ಬಸ್, ಬ್ರೇಕ್ ವೈಫಲ್ಯದಿಂದಾಗಿ ಬನಿಹಾಲ್ ಬಳಿಯ ನಚ್ಲಾನಾದಲ್ಲಿ ನಿಲ್ಲಿಸಲು ವಿಫಲವಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನೆ ಹಾಗೂ ಪೊಲೀಸ್​ ಸಿಬ್ಬಂದಿ ಬಸ್​ ಅನ್ನು ಕಷ್ಟಪಟ್ಟು ತಡೆದಿದ್ದಾರೆ, ಹೀಗಾಗಿ ಜಮ್ಮು-ಕಾಶ್ಮೀರ ಹೆದ್ದಾರಿಯಲ್ಲಿ ಸಂಭಾವ್ಯ ಅಪಘಾತವನ್ನು ತಪ್ಪಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಲಿಸುತ್ತಿದ್ದ ಬಸ್​ನಿಂದ ಹತ್ತು ಮಂದಿ ಕೆಳಗೆ ಹಾರಿರುವ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನ್ನು ಬಸ್‌ ನಿಂದ ಹಾರಿದ ಕೆಲ ಪ್ರಯಾಣಿಕರು ಬಸ್‌ನ ಟೈರ್‌ಗಳ ಕೆಳಗೆ ಕಲ್ಲುಗಳನ್ನು ಇಟ್ಟು ಹೊಳೆಗೆ ಬೀಳದಂತೆ ತಡೆದಿದ್ದಾರೆ.  ಈ ಘಟನೆಯ ದೃಶ್ಯ ವೈರಲ್‌ ಆಗ್ತಿದೆ.

— 6 Block South Patel Nagar (NGO REGD)🇮🇳 (@NgoPatelNagar) July 3, 2024