ಕಲ್ಲಾಕುರಿಚಿ: ನಕಲಿ ಮದ್ಯ ಸೇವಿಸಿದ ಜನ ತೀವ್ರ ಅಸ್ವಸ್ಥಗೊಂಡಿರುವ ಘಟನೆಯಲ್ಲಿ ಸಾವಿನ ಸಂಖ್ಯೆ ಇದೀಗ 12ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಇಂದು ತಮಿಳುನಾಡಿನ ಕಲ್ಲಾಕುರಿಚಿಯಲ್ಲಿ ನಕಲಿ ಮದ್ಯ ಸೇವಿಸಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಈ ಪೈಕಿ ಆರಂಭದಲ್ಲಿ ನಾಲ್ವರು ಮೃತಪಟ್ಟಿದ್ದರು.

ಈ ಘಟನೆ ಸಂಬಂಧ ಕಲ್ಲಾಕುರಿಚಿ ಜಿಲ್ಲಾಧಿಯಾರಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ. ಇತ್ತ ಪೊಲೀಸ್ ಎಸ್‌ಪಿಯನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ.

ಈ ನಕಲಿ ಮಧ್ಯವನ್ನು ದಿನಗೂಲಿ ನೌಕರರು ಇಂದು ಸಂಜೆ ಕಡಿಮೆ ಬೆಲೆಗೆ ಲಭ್ಯವಿದ್ದ ನಕಲಿ ಮದ್ಯವನ್ನು ಸೇವಿಸಿದ್ದಾರೆ. ಮದ್ಯ ಸೇವಿಸಿದ ಕೆಲ ಹೊತ್ತಲ್ಲೇ ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ. ಹಲವರನ್ನು ಆಸ್ಪತ್ರೆ ದಾಖಲಿಸಲಾಗಿದೆ. ಕೆಲವರು ಮನೆ ಸೇರಿಕೊಳ್ಳುವ ಹೊತ್ತಿಗೆ ಮೃತಪಟ್ಟಿದ್ದಾರೆ.