ಚೀನಾ: ಯುವತಿಯೊಬ್ಬಳು 20 ಪ್ರಿಯಕರರಿಂದ 20 ಐಫೋನ್ ಗಿಫ್ಟ್ ಪಡೆದು ಬಳಿಕ ಎಲ್ಲ ಫೋನ್ ಮಾರಿ ಹೊಸ ಮನೆ ಖರೀದಿಸಿ ಸುದ್ದಿಯಾಗಿದ್ದಾಳೆ. ಹೌದು. . ಈ ಘಟನೆ ಚೀನಾದಲ್ಲಿ ನಡೆದಿದೆ.
ಚೀನಾದ ಮೂಲದ ಈ ಯುವತಿಯ ಹೆಸರು Xiaoli. ಸದ್ಯ ಈಕೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಪೋಸ್ಟ್ಗಳು ಹರಿದಾಡುತ್ತಿದೆ. ವಾಸ್ತವವಾಗಿ ಈ ಘಟನೆ 2016ರಲ್ಲಿ ನಡೆದಿದೆ. @tech_grammm ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈಕೆಯ ಕುರಿತು ಹಾಕಲಾದ ಫೋಸ್ಟ್ ಒಂದು ಸದ್ಯ ಎಲ್ಲೆಡೆ ವೈರಲ್ ಆಗಿದೆ.
ಬಡ ಕುಟುಂಬದಿಂದ ಬಂದ ಈಕೆ ಸ್ವಂತ ಮನೆ ಖರೀದಿಸಲು ಈ ರೀತಿ ಪ್ಲ್ಯಾನ್ ಮಾಡಿದ್ದಾಳೆ ಎಂದು ತಿಳಿದುಬಂದಿದೆ. ತನ್ನ ಎಲ್ಲ ಐಫೋನ್ಗಳನ್ನು ಭಾರತದ ಕರೆನ್ಸಿಯ ಅಂದಾಜಿನ ಪ್ರಕಾರ 14 ಲಕ್ಷಕ್ಕೂ ಅಧಿಕ ಬೆಲೆಗೆ ಮಾರಿ ಡೌನ್ ಪೇಮೆಂಟ್ನಲ್ಲಿ ಹೊಸ ಮನೆ ಖರೀದಿಸಿದ್ದಾಳೆ ಎಂದು ತಿಳಿದು ಬಂದಿದೆ.

