ಪುಣೆ: ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ದಂಪತಿ ಹಾರಿ ರಸ್ತೆಯ ಮೇಲೆ ಬಿದ್ದ ಘಟನೆ ಪುಣೆಯ ಅಹ್ಮದ್ ನಗರ-ಕಲ್ಯಾಣ್ ಹೆದ್ದಾರಿಯಲ್ಲಿ ನಡೆದಿದೆ.
ಅದೃಷ್ಟವಶಾತ್, ದಂಪತಿಗೆ ಅಪಘಾತದಲ್ಲಿ ಗಾಯವಾದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬರುವಂತೆ, ವೇಗವಾಗಿ ಬಂದ ಕಾರು ದಂಪತಿ ಹೋಗುತ್ತಿದ್ದ ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ನಂತರ ಅವರು ಮೇಲೆ ಹಾರಿ ಹೋಗಿ ನೆಲಕ್ಕೆ ಅಪ್ಪಳಿಸಿ ಬಿದ್ದಿದ್ದಾರೆ.
ದಂಪತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಅಲ್ಲದೆ, ಕಾರಿನ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

