ಮೊರೆನಾ: 7ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಕುತ್ತಿಗೆಗೆ ನೇಣು ಬಿಗಿದುಕೊಂಡು ರೀಲ್ಸ್ ಮಾಡಲು ಹೋಗಿ ತನ್ನ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ಮಧ್ಯಪ್ರದೇಶ ಅಂಬಾದಲ್ಲಿ ನಡೆದಿದೆ.
ಕರಣ್ ಪರ್ಮಾರ್ (11) ಮೃತ ಬಾಲಕ ಎಂದು ಗುರುತಿಸಲಾಗಿದೆ. ಮೃತ ಕರಣ್ ಪರ್ಮಾರ್ ಲೇನ್ ರಸ್ತೆಯ ಖಾಲಿ ಜಾಗದಲ್ಲಿ ಇತರೆ ಮಕ್ಕಳೊಂದಿಗೆ ಆಟವಾಡುತ್ತಿದ್ದನು. ಅದೇ ವೇಳೆ ಹಗ್ಗವನ್ನು ಜೋತು ಹಾಕಿ ರೀಲ್ ಮಾಡಲು ಮುಂದಾಗಿದ್ದಾನೆ. ಆದರೆ ಇದೇ ವೇಳೆ ಆ ಹಗ್ಗ ಏಕಾಏಕಿ ಬಾಲಕನ ಕೊರಳಿಗೆ ಸಿಕ್ಕಿಹಾಕಿಕೊಂಡಿದೆ.
ಇದರಿಂದ ಬಾಲಕ ಒದ್ದಾಡಲು ಶುರು ಮಾಡಿದ್ದಾನೆ. ಆದರೆ ಕೆಲ ಸಮಯದ ಬಳಿಕ ವಿದ್ಯಾರ್ಥಿಗಳು ಕರಣ್ ಪರ್ಮಾರ್ ಬಳಿ ಹೋಗುವಷ್ಟರಲ್ಲೇ ಆತ ಮೃತಪಟ್ಟಿದ್ದಾನೆ. ಆದರೆ ಇದೇ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಈ ವಿಷಯ ತಿಳಿದ ಕೂಡಲೇ ಬಾಲಕನ ಪೋಷಕರು ಸ್ಥಳಕ್ಕೆ ದೌಡಾಯಿಸಿ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟೊತ್ತಿಗೆ ಬಾಲಕ ಮೃತಪಟ್ಟಿದ್ದಾನೆ ಅಂತ ವೈದ್ಯರು ತಿಳಿಸಿದ್ದಾರೆ.

