Bengaluru 25°C
Ad

ರೇಣುಕಸ್ವಾಮಿ ಹತ್ಯೆ ಕೇಸ್ : ನಟ ದರ್ಶನ್ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಮೂವರು ಸಹಚರರನ್ನು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಮೂವರು ಸಹಚರರನ್ನು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಪೊಲೀಸ್‌ ಕಸ್ಟಡಿ ಅಂತ್ಯ ಹಿನ್ನೆಲೆ ವಿಚಾರಣೆಗೆ ಒಳಪಡಿಸಲಾಯಿತು.ನಗರದ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ದರ್ಶನ್ ಹಾಗೂ ಆಪ್ತರಾದ ವಿನಯ್‌, ಪ್ರದೂಷ್‌ ಹಾಗೂ ಧನರಾಜ್‌ರನ್ನು ಶನಿವಾರ ಹಾಜರುಪಡಿಸಿದ್ದರು.

ಕಳೆದ 12 ದಿನಗಳಿಂದ ಪೊಲೀಸ್‌ ಕಸ್ಟಡಿಯಲ್ಲಿದ್ದ ದರ್ಶನ್ ಹಾಗೂ ಗ್ಯಾಂಗ್ ಮುಂದಿನ ವಿಚಾರಣೆಗೆ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸಬೇಕಾಗಿದೆ. ರೇಣುಕಾಸ್ವಾಮಿ ಭೀಕರ ಹತ್ಯೆ ಹಿನ್ನೆಲೆ ಈಗಾಗಲೇ ಎ1 ಆರೋಪಿ ಪವಿತ್ರಾ ಗೌಡ ಸೇರಿ ಉಳಿದ 13 ಮಂದಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

Ad
Ad
Nk Channel Final 21 09 2023
Ad