Bengaluru 27°C
Ad

ಕ್ಲಾಸ್​ಮೇಟ್​ ಹುಟ್ಟುಹಬ್ಬ: ಶಾಲೆಯಲ್ಲಿ ಬಿಯರ್​ ಪಾರ್ಟಿ ಮಾಡಿದ ವಿದ್ಯಾರ್ಥಿನಿಯರು

Party

ರಾಯ್ಪುರ್​: ತರಗತಿಯಲ್ಲೇ ವಿದ್ಯಾರ್ಥಿನಿಯರು ಬಿಯರ್ ಪಾರ್ಟಿ ಮಾಡಿರುವ ಆಘಾತಕಾರಿ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯ ಮಸ್ತೂರಿ ಪ್ರದೇಶದಲ್ಲಿ ನಡೆದಿದೆ. ವಿದ್ಯಾರ್ಥಿನಿಯರು ಬಿಯರ್ ಪಾರ್ಟಿ ಮಾಡುತ್ತಿರುವ ಫೋಟೋ ಮತ್ತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರಿ ಆಕ್ರೋಶಕ್ಕೆ ಗುರಿಯಾಗಿದೆ.

ಈ ವಿಚಾರ ತಮ್ಮ ಗಮನಕ್ಕೆ ಬರುತ್ತಿದ್ದಂತೆ ಉನ್ನತ ಅಧಿಕಾರಿಗಳು ತಕ್ಷಣ ತನಿಖೆಗೆ ಆದೇಶಿಸಿದ್ದಾರೆ.

ಸ್ಥಳೀಯ ಮಾಧ್ಯಮಗಳ ಪ್ರಕಾರ ಬಿಲಾಸ್​ಪುರ ಜಿಲ್ಲೆಯ ಭಟ್ಚೌರ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ ಸಹಪಾಠಿಯೊಬ್ಬರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಇದೇ ವೇಳೆ ವಿದ್ಯಾರ್ಥಿನಿಯರು ಬಿಯರ್ ಪಾರ್ಟಿ ಆಯೋಜಿಸಿದ್ದರು. ತರಗತಿಯ ಒಳಗಡೆ ಬಿಯರ್​ ಸೇವನೆ ಮಾಡಿದ್ದು, ವಿದ್ಯಾರ್ಥಿನಿಯರು ತುಂಬಾ ನಶೆಯಲ್ಲಿದ್ದರು ಎಂದು ವರದಿಯಾಗಿದೆ. ವಿದ್ಯಾರ್ಥಿನಿಯರು ಬಿಯರ್ ಬಾಟಲ್​ಗಳನ್ನು ಹಿಡಿದು ಫೋಟೋ ಮತ್ತು ರೀಲ್‌ಗಳನ್ನು ಸಹ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಾಲಕಿಯರ ಈ ಕೃತ್ಯದಲ್ಲಿ ಶಾಲೆಯ ಶಿಕ್ಷಕರೂ ಸಹ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಶಾಲೆಯಲ್ಲಿ ವಿದ್ಯಾರ್ಥಿನಿಯರು ಮದ್ಯ ಸೇವಿಸುವುದನ್ನು ಯಾರು ಕೂಡ ತಡೆಯಲಿಲ್ಲ ಎಂದು ತಿಳಿದುಬಂದಿದೆ.

Ad
Ad
Nk Channel Final 21 09 2023