ಜೈಪುರ: ಅಜ್ಮೀರ್ ರಸ್ತೆಯ ಸುದರ್ಶನಪುರ ಪುಲಿಯಾ ಕಡೆಗೆ ಚಾಲಕರಹಿತ ಕಾರು ಶನಿವಾರ ಎಲಿವೇಟೆಡ್ ರಸ್ತೆಯಲ್ಲಿ ವೇಗವಾಗಿ ಚಲಿಸಿ ನಿಲ್ಲಿಸಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಚಾಲಕರು ತಮ್ಮ ವಾಹನಗಳನ್ನು ಉಳಿಸಲು ಪರದಾಡಬೇಕಾಯಿತು. ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹತ್ತಿಕೊಂಡು ಸಂಪೂರ್ಣ ಉರಿದು ಹೋಗಿದೆ.
ವರದಿಗಳ ಪ್ರಕಾರ, ಶುಕ್ರವಾರ ಸಂಜೆ ಈ ಘಟನೆ ನಡೆದಿದ್ದು, ಇದನ್ನು ದಾರಿಹೋಕರೊಬ್ಬರು ಫೋನ್ನಲ್ಲಿ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅದೃಷ್ಟವಶಾತ್ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.
जयपुर में कार में आग लगी। शुक्र है किसी को कुछ नहीं हुआ pic.twitter.com/BIfy4O81hR
— Narendra Nath Mishra (@iamnarendranath) October 12, 2024

