ಕೇರಳ: ಕೇರಳ ಬಸ್ ಕಂಡಕ್ಟರ್‌ನೋರ್ವ ಸಮಯ ಪ್ರಜ್ಞೆ ಮೆರೆದು ಪ್ರಯಾಣಿಕನೋರ್ವನ ಜೀವ ಉಳಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಕಂಡಕ್ಟರ್‌ನ ಸಮಯ ಪ್ರಜ್ಞೆಗೆ ಈಗ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ವೀಡಿಯೋದಲ್ಲಿ ಕಾಣಿಸುವಂತೆ ಬಸ್‌ ಹಿಂಭಾಗಿನ ಸಮೀಪದ ಸೀಟಿಗೆ ಒತ್ತಿ ನಿಂತುಕೊಂಡು ಬಸ್ ಕಂಡಕ್ಟರ್ ಟಿಕೆಟ್ ನೀಡುತ್ತಿರುವ ವೇಳೆ ಬಸ್‌ ಸಡನ್ ಬ್ರೇಕ್ ಹಾಕಿದೆ. ಈ ವೇಳೆ ಬಾಗಿಲ ಬಳಿ ನಿಂತಿದ್ದ ಯುವಕನೋರ್ವ ಮುಗ್ಗರಿಸಿ ಇನ್ನೇನು ತೆರೆದಿದ್ದ ಬಾಗಿಲಿನಲ್ಲಿ ಕೆಳಗೆ ಬೀಳಬೇಕು ಅನ್ನುವಷ್ಟರಲ್ಲಿ ಕಂಡಕ್ಟರ್ ತನ್ನ ಒಂದೇ ಕೈನಿಂದ ಆತನನ್ನು ತಾನು ನಿಂತಲಿಂದ ಒಂದು ಚೂರು ಅತ್ತಿತ್ತ ಅಲುಗದಂತೆ ಹಿಡಿದು ಆತನ ಪ್ರಾಣ ಕಾಪಾಡಿದ್ದಾನೆ.

https://twitter.com/i/status/1798912796907938149

ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಒಂದು ವೇಳೆ ಕಂಡಕ್ಟರ್ ಆತನ ಕೈ ಹಿಡಿಯದೇ ಹೋದರೆ ಆತ ತೆರೆದ ಬಾಗಿಲಿನ ಮೂಲಕ ಬಸ್ಸಿನಿಂದ ಕೆಳಗೆ ಬಿದ್ದು ಅವಾಂತರ ಸೃಷ್ಟಿಯಾಗುತ್ತಿದ್ದುದ್ದಂತು ಪಕ್ಕ. ಆದರೆ ಇಲ್ಲಿ ಕಂಡಕ್ಟರ್‌ನ ಸಮಯ ಪ್ರಜ್ಞೆಯಿಂದ ಯಾವುದೇ ಅನಾಹುತವಾಗದಂತೆ ಆತ ಪಾರಾಗಿದ್ದಾನೆ.