ಆಗ್ರಾ : ಭೋಪಾಲ್‌ನಿಂದ ಆಗ್ರಾಗೆ ಹೋಗುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಕೊಡಲಾದ ಊಟದಲ್ಲಿ ಜಿರಳೆ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಇದರ ನಿರ್ವಹಣೆ ಹೊತ್ತ ಐಆರ್‌ಸಿಟಿಸಿ, ಪ್ರಯಾಣಿಕ ದಂಪತಿಯಲ್ಲಿ ಕ್ಷಮೆ ಕೇಳಿದೆ.
ವಂದೇ ಭಾರತ್ ರೈಲಿನಲ್ಲಿ ತಮ್ಮ ಸಂಬಂಧಿಕರಿಗೆ ಕೊಡಲಾದ ಊಟದಲ್ಲಿ ಜಿರಳೆ ಕಾಣಿಸಿಕೊಂಡ ಬಗ್ಗೆ ವಿದಿತ್ ವರ್ಷಣೆ ತಮ್ಮ ಎಕ್ಸ್ ಖಾತೆ ಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಐಆರ್‌ಸಿಟಿಸಿ ಕ್ಷಮೆ ಯಾಚಿಸಿದೆ. ಜೊತೆಗೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಭರವಸೆ ನೀಡಿದೆ. ಈ ಮೊದಲೂ ಇಂತಹ ಪ್ರಕರಣಗಳು ದಾಖಲಾಗಿದ್ದು, ರೈಲ್ವೆಯಲ್ಲಿ ನೀಡಲಾಗುವ ಆಹಾರದ ಬಗ್ಗೆ ಕಳವಳಕ್ಕೆ ಕಾರಣವಾಗಿದೆ.

