Bengaluru 22°C
Ad

ಅಣ್ಣಾಮಲೈ ಫೋಟೋ ಹಾಕಿ ಮೇಕೆ ತಲೆ ಕತ್ತರಿಸಿ ಸಂಭ್ರಮಿಸಿದ ಡಿಎಂಕೆ ಕಾರ್ಯಕರ್ತರು

Dkm

ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದಕ್ಕೆ ಡಿಎಂಕೆ ಕಾರ್ಯಕರ್ತರು ಮೇಕೆಯನ್ನು ನಡು ರಸ್ತೆಯಲ್ಲಿ ಕೊಂದು ಸಂಭ್ರಮಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಅಣ್ಣಾಮಲೈ ಫೋಟೋ ವನ್ನು ಮೇಕೆ ಕತ್ತಿಗೆ ನೇತು ಹಾಕಿ ನಡು ರಸ್ತೆಗೆ ತಂದು ಒಂದೇ ಏಟಿಗೆ ತಲೆಯನ್ನು ಕತ್ತರಿಸಿ ಡಿಎಂಕೆ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

ಇನ್ನು ಬಿಜೆಪಿ ನಾಯಕ ಅಮರ್‌ ಪ್ರಸಾದ್‌ ರೆಡ್ಡಿ ಅವರು ಈ ವಿಡಿಯೋವನ್ನು ಅಪ್ಲೋಡ್‌ ಮಾಡಿ ಮುಖ್ಯಮಂತ್ರಿ ಸ್ಟಾಲಿನ್‌ ನಿಮಗೆ ನಾಚಿಕೆಯಾಗಬೇಕು. ನಿಮ್ಮ ಅನಾಗರಿಕ ವರ್ತನೆ ಸ್ವೀಕಾರಾರ್ಹವಲ್ಲ. ದಯವಿಟ್ಟು ನಿಮ್ಮ ಕಾರ್ಯಕರ್ತರಿಗೆ ಮೂಲಭೂತ ಸಭ್ಯತೆಯನ್ನು ಪ್ರದರ್ಶಿಸಿಲು ಹೇಳಿ. ತಮಿಳುನಾಡು ಪೊಲೀಸರು ವೀಕ್ಷಕರಾಗುವ ಬದಲು ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.

Ad
Ad
Nk Channel Final 21 09 2023
Ad