Bengaluru 27°C
Ad

ಲಂಡನ್‌ನ ಪ್ರತಿಷ್ಠಿತ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಭಾರತದ ಆಟೋ ಚಾಲಕಿ

Award

ಲಂಡನ್: ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಹಳ್ಳಿಯೊಂದರ 18 ವರ್ಷದ ರಿಕ್ಷಾ ಚಾಲಕಿ ಆರತಿ ಬ್ರಿಟನ್​​ನ ಪ್ರತಿಷ್ಠಿತ ಮಹಿಳಾ ಸಬಲೀಕರಣ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಪ್ರಿನ್ಸ್ ಟ್ರಸ್ಟ್ ಅವಾರ್ಡ್ಸ್‌ನಲ್ಲಿ ವಿಶ್ವಪ್ರಸಿದ್ಧ ಮಾನವ ಹಕ್ಕುಗಳ ನ್ಯಾಯವಾದಿಯ ಹೆಸರಿನಲ್ಲಿ ಹೆಸರಿಸಲಾದ ಅಮಲ್ ಕ್ಲೂನಿ ಮಹಿಳಾ ಸಬಲೀಕರಣ ಪ್ರಶಸ್ತಿಯನ್ನು ಪಡೆದು ಆರತಿ ಬ್ರಿಟನ್ ರಾಜ ಕುಟುಂಬದ ಅರಮನೆ ಬಕಿಂಗ್‌ಹ್ಯಾಮ್ ಪ್ಯಾಲೇಸ್‌ನಲ್ಲಿ ಕಿಂಗ್ ಚಾರ್ಲ್ಸ್ III ಅವರನ್ನು ಭೇಟಿಯಾಗಿದರು.

ಸರ್ಕಾರದ ಪಿಂಕ್ ಇ-ರಿಕ್ಷಾ ಚಾಲನೆ ಮಾಡುವ ಮೂಲಕ ಇತರ ಯುವತಿಯರಿಗೆ ಮಾದರಿ ಮತ್ತು ಮಹಿಳಾ ಸಬಲೀಕರಣಕ್ಕೆ ಸ್ಪೂರ್ತಿಯಾದ ಆರತಿಗೆ ಬ್ರಿಟನ್ನ ಪ್ರತಿಷ್ಠಿತ ಪ್ರಶಸ್ತಿ ನೀಡಲಾಯಿತು.

“ಇದೇ ರೀತಿಯ ಸವಾಲುಗಳನ್ನು ಎದುರಿಸುವ ಇತರ ಹುಡುಗಿಯರನ್ನು ಪ್ರೇರೇಪಿಸಲು ನಾನು ಹೆಮ್ಮೆಪಡುತ್ತೇನೆ. ಸರ್ಕಾರ ಈ ಪಿಂಕ್​​ ರಿಕ್ಷಾ ಯೋಜನೆ ಜಗತ್ತನ್ನು ವಿಭಿನ್ನ ಬೆಳಕಿನಲ್ಲಿ ನೋಡಲು ನನಗೆ ಸಹಾಯ ಮಾಡಿದೆ. ಈಗ ನಾನು ನನ್ನ ಸ್ವಂತ ಕನಸುಗಳನ್ನು ಮಾತ್ರವಲ್ಲದೆ ನನ್ನ ಮಗಳ ಕನಸುಗಳನ್ನೂ ಈಡೇರಿಸಬಲ್ಲೆ” ಎಂದು ಆರತಿ ಹೇಳಿರುವುದಾಗಿ ವರದಿಯಾಗಿದೆ.

 

Ad
Ad
Nk Channel Final 21 09 2023
Ad