Ad

ಅರವಿಂದ್​ ಕೇಜ್ರಿವಾಲ್​ರನ್ನು ಸಿಬಿಐಗೆ ಒಪ್ಪಿಸಿದ ನ್ಯಾಯಾಲಯ

Cbi (1)

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ರನ್ನು ನ್ಯಾಯಾಲಯವು ಸಿಬಿಐಗೆ ಒಪ್ಪಿಸಿದೆ. ಕೇಜ್ರಿವಾಲ್ ಅವರನ್ನು ಇಂದು (ಜೂನ್ 26) ಸಿಬಿಐ ಬಂಧಿಸಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ.

Ad
300x250 2

ದೆಹಲಿಯ ರೂಸ್ ಅವೆನ್ಯೂ ಕೋರ್ಟ್‌ಗೆ ಸಿಬಿಐ ಕೇಜ್ರಿವಾಲ್ ಅವರನ್ನು ಹಾಜರುಪಡಿಸಿತ್ತು, ಅಲ್ಲಿ ತನಿಖಾ ಸಂಸ್ಥೆ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥರನ್ನು ವಿಚಾರಣೆಗೆ ಕಸ್ಟಡಿಗೆ ಕೋರಿತ್ತು. ಮಂಗಳವಾರ (ಜೂನ್ 25) ಸಂಜೆ ತಿಹಾರ್ ಜೈಲಿನಲ್ಲಿ ಸಿಬಿಐ ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ವಿಚಾರಣೆ ನಡೆಸಿದ್ದರು.

ಕೇಜ್ರಿವಾಲ್ ಅವರ ಅರ್ಜಿಯೊಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ ಅವರ ಬಂಧನವಾಗಿದೆ.

Ad
Ad
Nk Channel Final 21 09 2023
Ad