ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಇಂದು (ಜೂನ್ 22) ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದು, ನ್ಯಾಯಾಲಯ ವಿಚಾರಣೆ ಮುಗಿದೊಡನೆ ದರ್ಶನ್ ಹಾಗೂ ಇತರ ಮೂವರು ಆರೋಪಿಗಳನ್ನು ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲಾಗಿದೆ.ಇನ್ನು ಜೈಲಿನಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು ದರ್ಶನ್ಗೆ ಈಗಾಗಲೇ ವಿಚಾರಣಾಧೀನ ಕೈದಿ ಸಂಖ್ಯೆಯನ್ನು ಸಹ ನೀಡಲಾಗಿದೆ.
ದರ್ಶನ್ಗೆ ವಿಚಾರಣಾಧೀನ ಕೈದಿ ಸಂಖ್ಯೆ 6106 ನ್ನು ನೀಡಲಾಗಿದೆ. ಇನ್ನು ಇಂದು ನ್ಯಾಯಾಂಗ ಬಂಧನಕ್ಕೆ ಒಳಪಟ್ಟ ಧನರಾಜ್ಗೆ 6107, ವಿನಯ್ಗೆ 6108, ಪ್ರದೂಶ್ಗೆ 6109 ಸಂಖ್ಯೆಗಳನ್ನು ನೀಡಲಾಗಿದೆ. ಭದ್ರತೆ ದೃಷ್ಟಿಯಿಂದ ದರ್ಶನ್ ಅನ್ನು ವಿಶೇಷ ಬ್ಯಾರಕ್ನಲ್ಲಿ ಇರಿಸಲಾಗಿದೆ. ಪರಪ್ಪನ ಅಗ್ರಹಾರದಲ್ಲಿ ಮೂರು ವಿಶೇಷ ಬ್ಯಾರಕ್ಗಳಿದ್ದು, ಇತರೆ ಕೈದಿಗಳಿಂದ ಅಪಾಯವಿರುವ ಆರೋಪಿಗಳನ್ನು ಈ ಬ್ಯಾರಕ್ನಲ್ಲಿ ಇಡಲಾಗುತ್ತಿದೆ. ಇದೀಗ ದರ್ಶನ್ ಅನ್ನು ಮೂರನೇ ಬ್ಯಾರಕ್ನಲ್ಲಿ ಇರಿಸಲಾಗಿದೆ.

