Ad

ಪರಪ್ಪನ ಅಗ್ರಹಾರದಲ್ಲಿ ದರ್ಶನ್ :​ ವಿಚಾರಣಾಧೀನ ಕೈದಿ ಸಂಖ್ಯೆ ಕೊಟ್ಟ ಪೊಲೀಸರು

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಇಂದು (ಜೂನ್ 22) ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದು, ನ್ಯಾಯಾಲಯ ವಿಚಾರಣೆ ಮುಗಿದೊಡನೆ ದರ್ಶನ್ ಹಾಗೂ ಇತರ ಮೂವರು ಆರೋಪಿಗಳನ್ನು ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲಾಗಿದೆ.

ಬೆಂಗಳೂರು:  ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಇಂದು (ಜೂನ್ 22) ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದು, ನ್ಯಾಯಾಲಯ ವಿಚಾರಣೆ ಮುಗಿದೊಡನೆ ದರ್ಶನ್ ಹಾಗೂ ಇತರ ಮೂವರು ಆರೋಪಿಗಳನ್ನು ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲಾಗಿದೆ.ಇನ್ನು ಜೈಲಿನಲ್ಲಿ ಬಿಗಿ ಬಂದೋಬಸ್ತ್‌ ಮಾಡಲಾಗಿದ್ದು ದರ್ಶನ್​ಗೆ ಈಗಾಗಲೇ ವಿಚಾರಣಾಧೀನ ಕೈದಿ ಸಂಖ್ಯೆಯನ್ನು ಸಹ ನೀಡಲಾಗಿದೆ.

Ad
300x250 2

ದರ್ಶನ್​ಗೆ ವಿಚಾರಣಾಧೀನ ಕೈದಿ ಸಂಖ್ಯೆ 6106 ನ್ನು ನೀಡಲಾಗಿದೆ. ಇನ್ನು ಇಂದು ನ್ಯಾಯಾಂಗ ಬಂಧನಕ್ಕೆ ಒಳಪಟ್ಟ ಧನರಾಜ್​ಗೆ 6107, ವಿನಯ್​ಗೆ 6108, ಪ್ರದೂಶ್​ಗೆ 6109 ಸಂಖ್ಯೆಗಳನ್ನು ನೀಡಲಾಗಿದೆ. ಭದ್ರತೆ ದೃಷ್ಟಿಯಿಂದ ದರ್ಶನ್​ ಅನ್ನು ವಿಶೇಷ ಬ್ಯಾರಕ್​ನಲ್ಲಿ ಇರಿಸಲಾಗಿದೆ. ಪರಪ್ಪನ ಅಗ್ರಹಾರದಲ್ಲಿ ಮೂರು ವಿಶೇಷ ಬ್ಯಾರಕ್​ಗಳಿದ್ದು, ಇತರೆ ಕೈದಿಗಳಿಂದ ಅಪಾಯವಿರುವ ಆರೋಪಿಗಳನ್ನು ಈ ಬ್ಯಾರಕ್​ನಲ್ಲಿ ಇಡಲಾಗುತ್ತಿದೆ. ಇದೀಗ ದರ್ಶನ್​ ಅನ್ನು ಮೂರನೇ ಬ್ಯಾರಕ್​ನಲ್ಲಿ ಇರಿಸಲಾಗಿದೆ.

Ad
Ad
Nk Channel Final 21 09 2023
Ad