ಚೆನ್ನೈ: ಅಕ್ರಮ ಮದ್ಯ (ಕಳ್ಳಭಟ್ಟಿ) ಸೇವಿಸಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಈ ಘಟನೆ ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಸಂಭವಿಸಿತ್ತು ಇದೀಗ ಮೃತರ ಸಂಖ್ಯೆ ಏರಿಕೆಗೊಂಡಿದೆ.
60ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದು, ಕಲ್ಲಕುರಿಚಿ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ದುರಂತದ ಬಗ್ಗೆಯ ತನಿಖೆಯನ್ನು ಸಿಬಿ ಸಿಐಡಿಗೆ ವಹಿಸಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಆದೇಶಿಸಿದ್ದಾರೆ.ಕಲ್ಲಕುರುಚಿ ದುರಂತಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನು ಬಂಧಿಸಿಲಾಗಿದೆ.
ಅಕ್ರಮ ಮದ್ಯ ಸೇವಿಸಿ ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರಿಗೆ 50 ಸಾವಿರ ಪರಿಹಾರವನ್ನು ತಮಿಳುನಾಡು ಸರ್ಕಾರ ಘೋಷಿಸಿದೆ.

