ವಾಷಿಂಗ್ಟನ್: ಭಾರತೀಯ ವಿದ್ಯಾರ್ಥಿ ಕೈಗೆ ಕೋಳ ಹಾಕಿ, ನೆಲಕ್ಕೆ ಕೆಡವಿ, ಹಿಂಸೆ ಕೊಟ್ಟು ಅಮೆರಿಕದಿಂದ ಗಡಿಪಾರು ಮಾಡಿರುವ ಘಟನೆ ನ್ಯೂಜೆರ್ಸಿಯ ನ್ಯೂವಾರ್ಕ್ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಭಾರತೀಯ ವಿದ್ಯಾರ್ಥಿಗೆ ಹಿಂಸೆ ಕೊಟ್ಟಿದ್ದು, ಈ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ವಿಡಿಯೋವನ್ನು ಸಾಕ್ಷಿ ಮತ್ತು ಭಾರತೀಯ-ಅಮೆರಿಕನ್ ಉದ್ಯಮಿ ಕುನಾಲ್ ಜೈನ್ ಎಂಬವರು ಹಂಚಿಕೊಂಡಿದ್ದಾರೆ.
ಅಮೆರಿಕದ ಪೊಲೀಸ್ ಅಧಿಕಾರಿಗಳು ನೆಲಕ್ಕೆ ಒತ್ತುತ್ತಿದ್ದು, ನಾಲ್ವರು ಅಧಿಕಾರಿಗಳು ಆತನನ್ನು ಹಿಡಿದಿಟ್ಟುಕೊಂಡಿದ್ದಾರೆ. ಅವರಲ್ಲಿ ಇಬ್ಬರು ತಮ್ಮ ಮೊಣಕಾಲುಗಳನ್ನು ವಿದ್ಯಾರ್ಥಿ ಬೆನ್ನಿನ ಮೇಲೆ ಇಟ್ಟುಕೊಂಡಿದ್ದಾರೆ.
ವಿದ್ಯಾರ್ಥಿಯ ಕಾಲುಗಳು ಮತ್ತು ಕೈಗಳನ್ನು ಕಟ್ಟಿ ಹಾಕಿರುವುದು ಕಂಡುಬಂದಿದೆ. ಈ ವಿಷಯದ ಬಗ್ಗೆ ತನಿಖೆ ಮಾಡಲು ಮತ್ತು ವಿದ್ಯಾರ್ಥಿಗೆ ಸಹಾಯ ಮಾಡಲು ಅಮೆರಿಕದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಮನವಿ ಮಾಡಿಕೊಂಡಿದ್ದಾರೆ.

