ಹುಬ್ಬಳ್ಳಿ : ಇಂದು ದೇಶದಾದ್ಯಂತ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಈ ಮೂಲಕ  ಉತ್ತಮ ಆರೋಗ್ಯಕ್ಕೆ ಯೋಗ ಪರಿಣಾಮಕಾರಿ ಎಂದು ಜಾಗೃತಿ ಮೂಡಿಸಲಾಗುತ್ತಿದೆ. ಈ ಸಂಬಂಧ ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಯೋಗ ದಿನಾಚರಣೆಗೆ ನೃಪತುಂಗ ಬೆಟ್ಟದ ತಪ್ಪಲಿನಲ್ಲಿ ಯೋಗಾಸನ ಮಾಡುವ ಮೂಲಕ ಯೋಗ ದಿನಾಚರಣೆಗೆ ಚಾಲನೆ ನೀಡಲಾಯಿತು.

ಇನ್ನೂ ಶಾಸಕ ಮಹೇಶ ಟೆಂಗಿನಕಾಯಿ ಸೇರಿದಂತೆ ಸ್ಥಳೀಯ ಪಾಲಿಕೆ ಸದಸ್ಯರಿಂದ ಯೋಗಾಸನ ಹಾಗೂ ಯೋಗಾಭ್ಯಾಸ ಮಾಡುವ ಮೂಲಕ ವಿಶ್ವ ಯೋಗ ದಿನ ಆಚರಣೆ ಆಚರಣೆ ಮಾಡಲಾಗಿದ್ದು, ಯೋಗ ದಿನಾಚರಣೆಯಲ್ಲಿ ಸಾರ್ವಜನಿಕರು ಭಾಗಿದ್ದರು.