Bengaluru 22°C
Ad

ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ನರೇಂದ್ರ ಮೋದಿ

ಇದೀಗ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ನರೇಂದ್ರ ಮೋದಿ ಸಜ್ಜಾಗಿದ್ದಾರೆ. ಇಂದು  ಪ್ರಮಾಣ ವಚನ  ಸ್ವೀಕಾರ ಸಮಾರಂಭ ರಾಷ್ಟ್ರಪತಿ ಭವನದಲ್ಲಿ ನಡೆಯಲಿದೆ. 

ದೆಹಲಿ: ಇದೀಗ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ನರೇಂದ್ರ ಮೋದಿ ಸಜ್ಜಾಗಿದ್ದಾರೆ. ಇಂದು  ಪ್ರಮಾಣ ವಚನ  ಸ್ವೀಕಾರ ಸಮಾರಂಭ ರಾಷ್ಟ್ರಪತಿ ಭವನದಲ್ಲಿ ನಡೆಯಲಿದೆ.

ಸಮಾರಂಭಕ್ಕೆ 8000ಕ್ಕೂ ಹೆಚ್ಚು ಗಣ್ಯರು ಆಗಮಿಸುವ ನಿರೀಕ್ಷೆಯಿದೆ. ವಿವಿಧ ದೇಶಗಳ ವಿದೇಶಿ ನಾಯಕರು ಭಾಗವಹಿಸಲು ಆಹ್ವಾನವನ್ನು ಸ್ವೀಕರಿಸಿದ್ದಾರೆ. ಅವರು ಇಂದು ನವದೆಹಲಿಗೆ ಆಗಮಿಸುವ ಯೋಜನೆ ಇದೆ.

ಸಮಾರಂಭದ ನಂತರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿರುವ ಔಪಚಾರಿಕ ಔತಣ ಕೂಟದಲ್ಲಿ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಸಾರ್ಕ್ ನಾಯಕರು ಸಮಾರಂಭದಲ್ಲಿ ಪಾಲ್ಗೊಳ್ಳಲು ಸಜ್ಜಾಗುತ್ತಿರುವ ಕಾರಣ ದೆಹಲಿಯು ಭಾನುವಾರ ಹೈ ಅಲರ್ಟ್ ಆಗಿದೆ. ಲೀಲಾ, ತಾಜ್, ಐಟಿಸಿ ಮೌರ್ಯ, ಕ್ಲಾರಿಡ್ಜಸ್ ಮತ್ತು ಒಬೆರಾಯ್ ಸೇರಿದಂತೆ ಪ್ರಮುಖ ಹೋಟೆಲ್‌ಗಳು ಈಗಾಗಲೇ ಬಿಗಿ ಭದ್ರತೆಯಲ್ಲಿವೆ.

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ನೇಪಾಳದ ಪ್ರಧಾನಿ ಪುಷ್ಪಾ ಕಮಲ್ ದಹಲ್, ಮಾಲ್ಡೀವಿಯನ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಇತರರು ಮೋದಿಯವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಪ್ರಮಾಣ ವಚನ  ಸ್ವೀಕಾರ ಸಮಾರಂಭ ಟಿವಿ ಸುದ್ದಿ ವಾಹಿನಿಗಳು ಮತ್ತು X ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.

Ad
Ad
Nk Channel Final 21 09 2023
Ad