Bengaluru 22°C
Ad

ಪಾಳುಬಿದ್ದ ಕಟ್ಟಡದ ಮೇಲಿಂದ ಸ್ನೇಹಿತನ ಕೈಹಿಡಿದು ರೀಲ್ಸ್ : ಇಬ್ಬರು ವಶಕ್ಕೆ

ಪಾಳುಬಿದ್ದ ಕಟ್ಟಡದ ಮೇಲಿಂದ ಸ್ನೇಹಿತನ ಕೈಹಿಡಿದು ನೇತಾಡುತ್ತಾ ಯುವತಿ ರೀಲ್ಸ್ ಮಾಡಿದ್ದು, ಅದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೀಗ ಆ ಯುವತಿ ಹಾಗೂ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಪುಣೆ: ಪಾಳುಬಿದ್ದ ಕಟ್ಟಡದ ಮೇಲಿಂದ ಸ್ನೇಹಿತನ ಕೈಹಿಡಿದು ನೇತಾಡುತ್ತಾ ಯುವತಿ ರೀಲ್ಸ್ ಮಾಡಿದ್ದು, ಅದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೀಗ ಆ ಯುವತಿ ಹಾಗೂ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

Ad
300x250 2

ಮೀನಾಕ್ಷಿ ಸಾಲುಂಕೆ (23) ಹಾಗೂ ಆಕೆಯ ಸ್ನೇಹಿತ ಮಿಹಿರ್ ಗಾಂಧಿ (27) ರೀಲ್ಸ್ ಮಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂರನೇ ವ್ಯಕ್ತಿ ತಲೆಮರೆಸಿಕೊಂಡಿರುವುದಾಗಿ ತಿಳಿದುಬಂದಿದೆ.

ಪುಣೆಯ ಜಂಬುಲ್ವಾಡಿ ಸ್ವಾಮಿನಾರಾಯಣ ಮಂದಿರದ ಬಳಿಯ ಪಾಳುಬಿದ್ದ ಕಟ್ಟಡದಲ್ಲಿ ಯುವತಿ ಸ್ನೇಹಿತನ ಕೈಯನ್ನು ಹಿಡಿದುಕೊಂಡು ಕಟ್ಟದಿಂದ ಇಳಿದು ನೇತಾಡುತ್ತಿದ್ದಾಗ ಆಕೆಯ ಸ್ನೇಹಿತರು ವಿವಿಧ ಆ್ಯಂಗಲ್ ನಲ್ಲಿ ವಿಡಿಯೊ ರೆಕಾರ್ಡ್ ಮಾಡಿದ್ದಾರೆ.

ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವ್ಯಕ್ತಿಯೊಬ್ಬರು ಈ ವಿಡಿಯೋವನ್ನು ಪುಣೆ ಪೊಲೀಸರಿಗೆ ಟ್ಯಾಗ್ ಮಾಡಿ ಇಂತಹ ಘಟನೆಗಳು ನಡೆಯದಂತೆ ತಡೆಯಲು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಭಾರತಿ ವಿದ್ಯಾಪೀಠ ಪೊಲೀಸ್ ಠಾಣೆಯ ಪೊಲೀಸರು ಈ ಬಗ್ಗೆ ಮಾಹಿತಿ ತಿಳಿದು ತನಿಖೆ ಪ್ರಾರಂಭಿಸಿದ್ದಾರೆ. ಜೂನ್ 21ರಂದು ತಡರಾತ್ರಿ ಯುವತಿ ಹಾಗೂ ಆಕೆಯ ಸ್ನೇಹಿತನನ್ನು ಠಾಣೆಗೆ ಕರೆಸಿ ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಮೂರನೇ ವ್ಯಕ್ತಿಯನ್ನು ಶೀಘ್ರದಲ್ಲಿಯೇ ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

https://x.com/punekarnews/status/1803647902327382127?

 

 

Ad
Ad
Nk Channel Final 21 09 2023
Ad