Bengaluru 23°C
Ad

ಹಾವನ್ನು ಬಾಯಿಯಲ್ಲಿ ಕಚ್ಚಿ ಹಿಡಿದು ಯುವಕನ ರೀಲ್ಸ್‌ : ಮಧ್ಯಾಹ್ನದ ವೇಳೆಗೆ ಮೃತ್ಯು

ಹಾವನ್ನು ಬಾಯಿಯಲ್ಲಿ ಕಚ್ಚಿ ಹಿಡಿದು  ರೀಲ್ಸ್‌ ಮಾಡುವ ಹುಚ್ಚು ಸಾಹಸಕ್ಕೆ ಕೈ ಹಾಕಿದ್ದ ಯುವಕ ಮಧ್ಯಾಹ್ನದ ವೇಳೆಗೆ ಸಾವನಪ್ಪಿದ್ದಾನೆ. ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಬನ್ಸವಾಡ ಮಂಡಲದ ದೇಸಾಯಿಪೇಟ್ ಗ್ರಾಮದ ಹಾವಾಡಿಗನೊಬ್ಬನ ಮಗ ಶಿವ ಎಂಬಾತ ಗ್ರಾಮದ ಕಾಲೋನಿಗೆ ಪ್ರವೇಶಿಸಿದ 6 ಅಡಿಯ ನಾಗರ ಹಾವನ್ನು ಹಿಡಿದು ಗ್ರಾಮದಿಂದ ಹೊರಗೆ ಬಿಡಲು ತೆಗೆದುಕೊಂಡು ಹೋಗುವ ವೇಳೆ ಹುಚ್ಚು ಸಾಹಸವನ್ನು ಮಾಡಿದ್ದಾನೆ.

ತೆಲಂಗಾಣ:  ಹಾವನ್ನು ಬಾಯಿಯಲ್ಲಿ ಕಚ್ಚಿ ಹಿಡಿದು  ರೀಲ್ಸ್‌ ಮಾಡುವ ಹುಚ್ಚು ಸಾಹಸಕ್ಕೆ ಕೈ ಹಾಕಿದ್ದ ಯುವಕ ಮಧ್ಯಾಹ್ನದ ವೇಳೆಗೆ ಸಾವನಪ್ಪಿದ್ದಾನೆ. ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಬನ್ಸವಾಡ ಮಂಡಲದ ದೇಸಾಯಿಪೇಟ್ ಗ್ರಾಮದ ಹಾವಾಡಿಗನೊಬ್ಬನ ಮಗ ಶಿವ ಎಂಬಾತ ಗ್ರಾಮದ ಕಾಲೋನಿಗೆ ಪ್ರವೇಶಿಸಿದ 6 ಅಡಿಯ ನಾಗರ ಹಾವನ್ನು ಹಿಡಿದು ಗ್ರಾಮದಿಂದ ಹೊರಗೆ ಬಿಡಲು ತೆಗೆದುಕೊಂಡು ಹೋಗುವ ವೇಳೆ ಹುಚ್ಚು ಸಾಹಸವನ್ನು ಮಾಡಿದ್ದಾನೆ.

ಹಾವನ್ನು ಹಿಡಿದುಕೊಂಡು ಅದನ್ನು ಬಾಯಿಯಲ್ಲಿ ಕಚ್ಚಿ ಹಿಡಿದಿದ್ದಾನೆ. ಇದನ್ನು ಅಲ್ಲಿದ್ದವರು ಅಚ್ಚರಿಗೊಂಡು ವಿಡಿಯೋ ಹಾಗೂ ಫೋಟೋ ತೆಗೆದಿದ್ದಾರೆ. ಆದರೆ ಬಾಯಿಯೊಳಗೆ ಹೋದ ಹಾವು ಶಿವನಿಗೆ ಕಚ್ಚಿದ್ದು, ಇದು ಶಿವನ ಗಮನಕ್ಕೆ ಬಂದಿರುವುದಿಲ್ಲ.

ಮಧ್ಯಾಹ್ನದ ವೇಳೆ ಇದ್ದಕ್ಕಿದ್ದಂತೆ ಶಿವ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಕೂಡಲೇ ಆತನನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಆತ ಆದಾಗಲೇ ಹಾವು ಕಡಿತದಿಂದ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.

 

 

Ad
Ad
Nk Channel Final 21 09 2023